- ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಅವಕಾಶ
ಬೆಂಗಳೂರು: . ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಮೂಲಕ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಈ ರಿಯಾಯಿತಿಯು 23 ಆಗಸ್ಟ್ 2025ರಿಂದ 12 ಸೆಪ್ಟೆಂಬರ್ 2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ.
ಇದಕ್ಕೂ ಮೊದಲು 11.02.2023ರೊಳಗೆ ದಾಖಲಾಗಿದ್ದ ಪ್ರಕರಣಗಳಿಗೆ ಒಂದು ಬಾರಿಯ ಕ್ರಮವಾಗಿ (One Time Measure) ಶೇಕಡಾ 50 ರಷ್ಟು ರಿಯಾಯಿತಿ ನೀಡಲಾಗಿತ್ತು. ನಂತರವೂ ಹಲವಾರು ಬಾರಿ ಅವಧಿ ವಿಸ್ತರಿಸಲಾಗಿತ್ತು. ಈಗ ಮತ್ತೊಮ್ಮೆ ವಾಹನ ಮಾಲೀಕರ ಬೇಡಿಕೆಯ ಮೇರೆಗೆ ಹೊಸ ಅವಧಿಯನ್ನು ಘೋಷಿಸಲಾಗಿದೆ.
ಇದರೊಂದಿಗೆ, 2018-19ನೇ ಸಾಲಿನ ಪೂರ್ವದಲ್ಲಿ ಸಾರಿಗೆ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೂ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಇತ್ಯರ್ಥಗೊಳಿಸುವ ಅವಕಾಶ ಕಲ್ಪಿಸಲಾಗಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ಅನುಮೋದನೆಯೊಂದಿಗೆ ಹೊರಡಿಸಲಾಗಿದೆ. ಆದ್ದರಿಂದ, ಬಾಕಿ ದಂಡ ಹೊಂದಿರುವ ವಾಹನ ಸವಾರರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಲು ಸರ್ಕಾರ ಮನವಿ ಮಾಡಿದೆ.