ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಇದಕ್ಕೂ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಸಭೆಯ ಬಳಿಕ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಂಬಂಧ ಆಯ್ಕೆಯಾದ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಇದರ ನಡುವೆಯೇ ರಾಜ್ಯಪಾಲರು ಧರ್ಮಸ್ಥಳ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ, ಡಿಕೆ ಶಿವಕುಮಾರ್ ಅವರು ಸಿಎಲ್‌ಪಿ ಸಭೆಗೂ ಮುನ್ನವೇ ರಾಜ್ಯಪಾಲರನ್ನು ಭೇಟಿ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಅವರ ಆಗಮನದ ಹಿನ್ನೆಲೆಯಲ್ಲಿ ಲೋಕಭವನದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿಸಲಾಗಿದೆ.








