ಬೆಂಗಳೂರು: ಭಾರೀ ಗಾಳಿ ಮತ್ತು ಮಳೆಗೆ ನಗರದಲ್ಲಿ ಅಫಘಾತ ಸಂಭವಿಸಿದ್ದು, ಆಟೋವೊಂದರ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಈ ದುರ್ಘಟನೆ ಶುಕ್ರವಾರ ಸಂಜೆ ಸುಮಾರು 7:30ರ ಸಮಯದಲ್ಲಿ ಸಿಕೆ ಅಚ್ಚುಕಟ್ಟು ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತ ಪಟ್ಟ ಆಟೋ ಚಾಲಕರನ್ನು ಇಟ್ಟಮಡು ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಅವರು ತಮ್ಮ ಆಟೋಗೆ ಗ್ಯಾಸ್ ತುಂಬಿಸಿಕೊಂಡು ಮನೆಗೆ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ. ಜೋರಾಗಿ ಬೀಸಿದ ಗಾಳಿಗೆ ಹತ್ತಿರದಲ್ಲಿದ್ದ ದೊಡ್ಡ ಮರವು ನಿಲ್ಲಿಸಿದ್ದ ಆಟೋ ಮೇಲೆ ಬಿದ್ದು, ಆಟೋ ಸಂಪೂರ್ಣ ಜಖಂಗೊಂಡಿದೆ. ಮರದ ಹೊಡೆತದಿಂದ ಗಂಭೀರವಾಗಿ ಗಾಯಗೊಂಡ ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲೇ ಮತ್ತೊಂದು ಕಾರಿನ ಮೇಲೂ ಮರ ಬಿದ್ದಿದ್ದು, ಆದರೆ ಕಾರಿನಲ್ಲಿ ಇದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಗರದ ಹಲವು ಭಾಗಗಳಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಪಡಿತರ ಮರಗಳು ಉರುಳಿ ಬೀಳುವ ಸಂಭವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಸಂಬಂಧಿತ ಇಲಾಖೆಗಳಿಂದ ಎಚ್ಚರಿಕೆ ನೀಡಲಾಗಿದೆ.ಇದನ್ನು ಓದಿ –ಮಾಜಿ ಮೇಯರ್ ಎನ್ ಪ್ರಕಾಶ್ ನಿಧನ
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರವನ್ನು ತೆರವುಗೊಳಿಸಿ ರಸ್ತೆ ಸಂಚಾರ ಸಹಜಗೊಳಿಸಲಾಯಿತು.