ಬೆಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎAಎ ಅನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಂಧಿತರಿAದ ಪೊಲೀಸರು 17.5 ಕೆಜಿ ಎಂಡಿಎAಎ ಮತ್ತು ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಅಕ್ರಮ ಸರಕುಗಳಿಗೆ ಕಾಳಸಂತೆಯಲ್ಲಿ 35 ಕೋಟಿ ಮೌಲ್ಯವಿದೆ.
ಆರೋಪಿಗಳು ದೆಹಲಿಯಲ್ಲಿ ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎAಎ ಖರೀದಿಸಿ ಬೆಂಗಳೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಪರಾಧಕ್ಕೆ ಬಳಸಲಾದ ಕಾರು, 4.18 ಕೆಜಿ ಎಂಡಿಎAಎ ಮತ್ತು ನಾಲ್ಕು ಮೊಬೈಲ್ ಫೋನ್‌ಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನು ಓದಿ –ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ
ಪ್ರಕರಣದಲ್ಲಿ ಭಾಗಿಯಾಗಿರುವ ಕೆಲವರು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆಹಚ್ಚಲು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದರು.








