By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Belgavi > ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
BelgaviKarnataka

ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ

Team Varthaman
Last updated: June 24, 2026 10:40 AM
Team Varthaman
Published: June 24, 2026
Share
SHARE

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಸೇರಿದ ನಿವಾಸ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು ಆರು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿರುವ ವೈ. ಮಂಜುನಾಥ್ ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರ ವಿರುದ್ಧ ಕೇಳಿಬಂದಿರುವ ಅಕ್ರಮ ಆಸ್ತಿ ಸಂಪಾದನೆ ಆರೋಪಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿರುವುದಾಗಿ ತಿಳಿದುಬಂದಿದೆ.

Join WhatsApp Group

ಗೋವಾ ಹಾಗೂ ಬೆಂಗಳೂರಿನ ಇಡಿ ಅಧಿಕಾರಿಗಳ ಜಂಟಿ ತಂಡವು ಬೆಳಗಾವಿಯ ದೂರದರ್ಶನ ಕೇಂದ್ರದ ಸಮೀಪದ ನಿವಾಸ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದೆ. ತನಿಖೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ 10ಕ್ಕೂ ಹೆಚ್ಚು ಅರೆಸೇನಾ ಪಡೆಯ ಯೋಧರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಇಡಿ ಅಧಿಕಾರಿಗಳು ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ಆಸ್ತಿ ವಿವರಗಳು, ಹಣಕಾಸು ವ್ಯವಹಾರಗಳು, ಬ್ಯಾಂಕ್ ಖಾತೆಗಳು ಹಾಗೂ ಇತರೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು, ಬಾರ್ ಮತ್ತು ರೆಸ್ಟೋರೆಂಟ್‌ ಸೇರಿದಂತೆ ವಿವಿಧ ಆಸ್ತಿಗಳನ್ನು ಸಂಪಾದಿಸಿರುವ ಆರೋಪಗಳ ಕುರಿತಾಗಿ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

ದಾಳಿ ನಡೆದ ಪ್ರಮುಖ ಸ್ಥಳಗಳು:

  • ಬೆಳಗಾವಿ ನಗರದ ದೂರದರ್ಶನ ಕೇಂದ್ರದ ಸಮೀಪದ ವೈ. ಮಂಜುನಾಥ್ ಅವರ ನಿವಾಸ.
  • ಬೆಂಗಳೂರಿನಲ್ಲಿರುವ ಅವರ ಅಪಾರ್ಟ್‌ಮೆಂಟ್.
  • ಮೈಸೂರಿನಲ್ಲಿರುವ ಅವರ ಆಪ್ತ ಮಹಿಳಾ ಸ್ನೇಹಿತೆಯ ಮನೆ.
  • ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ಆಪ್ತನ ನಿವಾಸ.
  • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐನಾಪುರ ಗ್ರಾಮದ ಸ್ನೇಹಿತನ ಮನೆ.
  • ಇತರೆ ಸಂಬಂಧಿತ ಸ್ಥಳಗಳು.

ಕೆಲವು ದಿನಗಳ ಹಿಂದೆ ವೈ. ಮಂಜುನಾಥ್ ಅವರ ಉದ್ಯಮ ಪಾಲುದಾರರು ಹಾಗೂ ಆಪ್ತರ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಲಭ್ಯವಾದ ಕೆಲವು ದಾಖಲೆಗಳಲ್ಲಿ ವೈ. ಮಂಜುನಾಥ್ ಅವರ ಹೆಸರು ಪತ್ತೆಯಾಗಿದ್ದ ಹಿನ್ನೆಲೆ, ಇದೀಗ ಅವರ ವಿರುದ್ಧ ನೇರವಾಗಿ ತನಿಖೆ ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ದಾಳಿ ವೇಳೆ ವೈ. ಮಂಜುನಾಥ್ ಅವರು ಬೆಳಗಾವಿಯ ನಿವಾಸದಲ್ಲಿ ಇರಲಿಲ್ಲ ಎನ್ನಲಾಗಿದ್ದು, ಇಡಿ ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ ಡಿಜಿಟಲ್ ಮಾಹಿತಿಗಳನ್ನು ವಶಪಡಿಸಿಕೊಂಡು ಪರಿಶೀಲನೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
  • ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಖಚಿತ: ಆರ್.ಅಶೋಕ
    by Team Varthaman
  • ಬಿಎಂಟಿಸಿ ಮಾಸಿಕ ಬಸ್ ಪಾಸ್ ದರ ಏರಿಕೆ
    by Team Varthaman
  • ಜೂನ್ 28ರವರೆಗೆ ರಾಜ್ಯದಲ್ಲಿ ಮಳೆ ಅಬ್ಬರ
    by Team Varthaman
  • ಕೋಚಿಂಗ್‌ ಕೇಂದ್ರದಲ್ಲಿ ಅಗ್ನಿ ಅವಘಡ: 11 ಮಂದಿ ಸಜೀವ ದಹನ
    by Team Varthaman
ಏಷ್ಯಾ ಕಪ್ 2025: ಸೆ.7ರಂದು ಭಾರತ vs ಪಾಕಿಸ್ತಾನ
ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ
ಹಾಸ್ಯ ನಟ ಬ್ಯಾಂಕ್ ಜನಾರ್ಧನ ಇನ್ನಿಲ್ಲ
RTE ಅಡಿಯಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಆದೇಶ
5 ವರ್ಷ ನಾನೇ ಸಿಎಂ; ನಮ್ಮ ಸರ್ಕಾರ ಬಂಡೆ ತರ ಇರುತ್ತದೆ: ಸಿದ್ದರಾಮಯ್ಯ
TAGGED:ED RaidED summonslatestnewsRaid
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaKarwarTrending

ಭಟ್ಕಳ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Team Varthaman
Team Varthaman
May 25, 2026
ಮೂವರು IPS ಅಧಿಕಾರಿಗಳ ವರ್ಗಾವಣೆ
ಯೋಗಾ ಯೋಗ..
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲರ ಜಾಮೀನು ರದ್ದು
ಯುಪಿ ಸರ್ಕಾರದ ಸ್ಪೀಕರ್‌ ಗೆ ಮೈಸೂರಿನಲ್ಲಿ ಖುರ್ಚಿ ತಯಾರಿಸಿ, ರವಾನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?