ಬೆಂಗಳೂರು:ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಹಣಕಾಸು ಗುತ್ತಿಗೆ ನಿರ್ದೇಶನಾಲಯ (ED) ಅಧಿಕಾರಿಗಳು ಬೆಂಗಳೂರು ನಗರದಲ್ಲಿ 18 ಸ್ಥಳಗಳಲ್ಲಿ ಭರ್ಜರಿ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ, ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಡಿ ಅಧಿಕಾರಿಗಳು ಸಂಬಂಧಿತ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಹಣಕಾಸು ಲೆಕ್ಕಪತ್ರಗಳು, ದಾಖಲೆಗಳು, ಹಣ ವರ್ಗಾವಣೆಗಳ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.ಇದನ್ನು ಓದಿ –ರಸ್ತೆ ಅಭಿವೃದ್ಧಿ: ಟನಲ್ ರಸ್ತೆ, ರಿಂಗ್ರೋಡ್ ಸೇರಿದಂತೆ 7 ಯೋಜನೆಗಳ ಕುರಿತು ಚರ್ಚೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯ ನಿರೀಕ್ಷೆಯಿದ್ದು, ಅಧಿಕೃತ ವಿವರಗಳು ಶೀಘ್ರದಲ್ಲೇ ಹೊರ ಬೀಳುವ ಸಾಧ್ಯತೆ ಇದೆ.