ಬೆಂಗಳೂರು : ನಗರದಲ್ಲಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ಅಬಕಾರಿ ಇಲಾಖೆಯ ಉಪ ಆಯುಕ್ತರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಟರಾಯನಪುರದಲ್ಲಿರುವ ಅಬಕಾರಿ ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಈ ದಾಳಿ ನಡೆದಿದೆ. ಈ ವೇಳೆ ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಅವರೊಂದಿಗೆ ಅಧೀಕ್ಷಕ ತಮ್ಮಣ್ಣ ಹಾಗೂ ಕಾನ್ಸ್ಟೇಬಲ್ ಲಕ್ಕಪ್ಪ ಅವರನ್ನೂ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಲಂಚದ ವ್ಯವಹಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ಪ್ರಕರಣದ ಕುರಿತು ಇನ್ನಷ್ಟು ವಿವರಗಳು ಬಹಿರಂಗವಾಗುವ ನಿರೀಕ್ಷೆಯಿದೆ.








