By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಸ್ಫೋಟಕ ತಿರುವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಸ್ಫೋಟಕ ತಿರುವು
BengaluruCrimeKarnataka

ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಸ್ಫೋಟಕ ತಿರುವು

Team Varthaman
Last updated: October 16, 2025 11:11 AM
Team Varthaman
Published: October 16, 2025
Share
SHARE
  • ಪತಿ ಡಾ. ಮಹೇಂದ್ರ ರೆಡ್ಡಿ ಬಂಧನ

ಬೆಂಗಳೂರು, ಅಕ್ಟೋಬರ್ 16: ವೈದ್ಯೆ ಡಾ. ಕೃತಿಕಾ ರೆಡ್ಡಿ ಅವರ ನಿಗೂಢ ಸಾವಿನ ಪ್ರಕರಣದಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಈ ಪ್ರಕರಣದಲ್ಲಿ ಎಫ್‌ಎಸ್‌ಎಲ್ ವರದಿ ಬಹಿರಂಗವಾಗಿದ್ದು, ಕೃತಿಕಾ ರೆಡ್ಡಿ ಅವರ ಸಾವು ಸೆಡೇಟಿವ್ “ಪ್ರೊಪೋಫಾಲ್” ಔಷಧಿಯ ಓವರ್‌ಡೋಸ್‌ನಿಂದ ಸಂಭವಿಸಿದೆ ಎಂಬುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ, ಪೊಲೀಸರು ಡಾ. ಕೃತಿಕಾ ರೆಡ್ಡಿ ಅವರ ಪತಿ ಡಾ. ಮಹೇಂದ್ರ ರೆಡ್ಡಿ ಅವರನ್ನು ಉಡುಪಿಯಲ್ಲಿ ಬಂಧಿಸಿದ್ದಾರೆ.

ಏಪ್ರಿಲ್ 24ರಂದು ಮರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವನ್ನು ಆರಂಭದಲ್ಲಿ ಅಸಹಜ ಸಾವು (UDR) ಎಂದು ದಾಖಲಿಸಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ಮೊದಲ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಕುಟುಂಬದವರು ಆರಂಭದಲ್ಲಿ ಸಾವಿಗೆ ಅನುಮಾನ ವ್ಯಕ್ತಪಡಿಸದೆ, ಮರಣೋತ್ತರ ಪರೀಕ್ಷೆಗೆ ಸಹ ಒಪ್ಪದಿದ್ದರು. ಆದರೆ ಪೊಲೀಸರ ಹಠದ ಮೇರೆಗೆ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

Join WhatsApp Group

ತನಿಖೆಯ ಭಾಗವಾಗಿ ಎಸ್‌ಒಸಿಒ (SOCO) ತಂಡ ಮೃತದೇಹದ ಬಳಿ ಪತ್ತೆಯಾದ ವೈದ್ಯಕೀಯ ಸಾಮಗ್ರಿಗಳು ಹಾಗೂ ಔಷಧಿಗಳನ್ನು ವಶಪಡಿಸಿಕೊಂಡು ಎಫ್‌ಎಸ್‌ಎಲ್ (Forensic Science Laboratory) ಗೆ ಕಳುಹಿಸಿತು.

ಎಫ್‌ಎಸ್‌ಎಲ್ ವರದಿಯ ಪ್ರಕಾರ, ಕೃತಿಕಾ ರೆಡ್ಡಿ ಅವರ ದೇಹದಲ್ಲಿ ಪ್ರೊಪೋಫಾಲ್ ಎಂಬ ನಿದ್ರಾಜನಕ ಔಷಧಿಯ ಪ್ರಮಾಣ ಮಿತಿಯನ್ನು ಮೀರಿದ್ದು, ಅದೇ ಅವರ ಸಾವಿಗೆ ಕಾರಣವಾಗಿದೆ ಎಂದು ದೃಢಪಟ್ಟಿದೆ.

ಈ ವರದಿ ಆಧರಿಸಿ ವೈದ್ಯಕೀಯ ಮತ್ತು ಕಾನೂನು ತಜ್ಞರ ಪರಿಶೀಲನೆಯ ನಂತರ, ಪೊಲೀಸರು ಪ್ರಕರಣವನ್ನು ಭಾರತೀಯ ದಂಡ ಸಂಹಿತೆ (IPC) 302 ಮತ್ತು ಭಾರತೀಯ ನ್ಯಾಯ ಸಂಹಿತೆ (BNS) 103 ಅಡಿಯಲ್ಲಿ ಕೊಲೆ ಪ್ರಕರಣವಾಗಿ ಪರಿವರ್ತಿಸಿದ್ದಾರೆ.

ಮೃತರ ತಂದೆಯ ದೂರಿನ ಆಧಾರದ ಮೇಲೆ, ಪೊಲೀಸರು ತನಿಖೆಯನ್ನು ವೇಗಗೊಳಿಸಿದ್ದು, ಉಡುಪಿಯಲ್ಲಿ ಅಡಗಿದ್ದ ಆರೋಪಿ ಡಾ. ಮಹೇಂದ್ರ ರೆಡ್ಡಿ ಅವರನ್ನು ಬಂಧಿಸಿದ್ದಾರೆ.ಇದನ್ನು ಓದಿ –ದೀಪಾವಳಿಗೆ ನಂದಿನಿ ಶುಗರ್ ಫ್ರೀ ಸಿಹಿ ತಿಂಡಿಗಳ ಬಿಡುಗಡೆ

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಈ ಪ್ರಕರಣದಲ್ಲಿ ಇನ್ನೂ ಕೆಲವು ವೈದ್ಯಕೀಯ ಹಾಗೂ ವೈಯಕ್ತಿಕ ಅಂಶಗಳು ಬೆಳಕಿಗೆ ಬರಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
CETನಲ್ಲಿ ಕಡಿಮೆ ಅಂಕ: ಮಗಳು ಹಾಗೂ ತಾಯಿ ಆತ್ಮಹತ್ಯೆಗೆ ಶರಣು
ಮೋದಿ ಕಪ್‌ ದೇಹದಾಡ್ಯ ಸ್ಪರ್ಧೆಯ ಭಿತ್ತಿಪತ್ರ ಬಿಡುಗಡೆ
ಬೆಂಗಳೂರಿನಲ್ಲಿ ಗೃಹಿಣಿಯ ಅನುಮಾನಾಸ್ಪದ ಸಾವು
ಮುಡಾ ಹಗರಣ: ₹100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
TAGGED:crimeMurder CasePropofolಕೊಲೆ ಪ್ರಕರಣಡಾ. ಕೃತಿಕಾಪ್ರೊಪೋಫಾಲ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Jammu & KashmirTrending

ನಾಳೆ ಚೆನಾಬ್‌ ಸೇತುವೆ ಉದ್ಘಾಟನೆ: ಮೋದಿ ಜಮ್ಮು ಕಾಶ್ಮೀರಕ್ಕೆ ಭೇಟಿ

Team Varthaman
Team Varthaman
June 5, 2025
IPL – 2025 | ಅಶುತೋಷ್ ಅಬ್ಬರ: ಲಕ್ನೋ ಎದುರು ಡೆಲ್ಲಿಗೆ ಜಯ
ಬೆಟ್ಟಿಂಗ್ ಆಪ್ ಹಗರಣ: ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ FIR ದಾಖಲೆ
ಮಾ.6ರಂದು ಸಚಿವ ಸಂಪುಟ ವಿಶೇಷ ಸಭೆ
ಇಂದಿನಿಂದ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?