ಬೆಂಗಳೂರು: ರಾಜ್ಯದ ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದ ಅವಧಿಯನ್ನು ಮೂರು ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ತೀರ್ಮಾನವನ್ನು ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಈ ಹಿಂದೆ ಜನವರಿ 31ರಂದು ಮುಕ್ತಾಯಗೊಳ್ಳಬೇಕಾಗಿದ್ದ ವಿಧಾನಮಂಡಲ ಜಂಟಿ ಅಧಿವೇಶನವು ಇದೀಗ ಫೆಬ್ರವರಿ 4ರವರೆಗೆ ನಡೆಯಲಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಅಧಿವೇಶನ ವಿಸ್ತರಣೆ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ.
ಕೇಂದ್ರ ಸರ್ಕಾರ ಮನರೇಗಾ ಯೋಜನೆಯ ಹೆಸರನ್ನು ಬದಲಿಸಿ ವಿಬಿಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಷಯದ ಬಗ್ಗೆ ಚರ್ಚೆ ನಡೆಸಲು ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನವನ್ನು ಕರೆಯಲಾಗಿತ್ತು.ಇದನ್ನು ಓದಿ –ಶಿಕ್ಷಣ ಇಲಾಖೆಯಲ್ಲಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಕಡ್ಡಾಯ
ಈ ಹಿನ್ನೆಲೆಯಲ್ಲಿ ಜನವರಿ 22ರಿಂದ ಅಧಿವೇಶನ ಆರಂಭವಾಗಿದ್ದು, ಹಲವು ಪ್ರಮುಖ ವಿಷಯಗಳ ಚರ್ಚೆ ಇನ್ನೂ ಬಾಕಿ ಉಳಿದಿರುವ ಕಾರಣ ಅಧಿವೇಶನವನ್ನು ವಿಸ್ತರಿಸಲಾಗಿದೆ. ಶನಿವಾರ ವಿಧಾನಮಂಡಲ ಜಂಟಿ ಅಧಿವೇಶನ ಇರುವುದಿಲ್ಲ. ಫೆಬ್ರವರಿ 4ರವರೆಗೆ ಅಧಿವೇಶನ ಮುಂದುವರಿಯಲಿದೆ .








