ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಸಮೀಪ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೊಳ್ಳೇಗಾಲ ನ್ಯಾಯಾಲಯದ ಶಿರಸ್ತೆದಾರ ನಂಜುಂಡಪ್ಪ ಹಾಗೂ ನ್ಯಾಯಾಲಯದ ಸಿಬ್ಬಂದಿ ಯಮುನಪ್ಪ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಕೃಷ್ಣಪ್ಪ, ಲೋಕೇಶ್ ಹಾಗೂ ಶಂಕರಪ್ಪ ಗಂಭೀರ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಅಪಘಾತಕ್ಕೀಡಾದ ವಾಹನವನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.ಇದನ್ನು ಓದಿ –ಜೂನ್ 23ಕ್ಕೆ ಟೋಲ್ ವಿರೋಧಿಸಿ ರಾಜ್ಯವ್ಯಾಪಿ ರೈತರ ಹೋರಾಟ
ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.








