ಬೆಂಗಳೂರು:ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ “ಕೊಲೆಗಾರ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಕಾನೂನು ಕ್ರಮ ಜರುಗಿದೆ. ಈ ಪ್ರಕರಣದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪೊಲೀಸರಿಗೆ ಇಂದು ಸಂಜೆಯೊಳಗೆ ಅವರನ್ನು ಬಂಧಿಸಲು ಸೂಚನೆ ನೀಡಿದ್ದಾರೆ.
ಮಹೇಶ್ ತಿಮರೋಡಿ ನೀಡಿದ ಹೇಳಿಕೆ ವಿಧಾನಸಭೆಯಲ್ಲೂ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ತಕ್ಷಣದ ಕ್ರಮಕ್ಕೆ ಆದೇಶಿಸಿದ್ದು, ಈಗಾಗಲೇ ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನು ಓದಿ –ಬೆಂಗಳೂರು ಅಗ್ನಿ ದುರಂತ – 5 ಸಾವು: ಕಟ್ಟಡ ಮಾಲೀಕ ಸೇರಿ 2 ಬಂಧನ
ಅದರ ಜೊತೆಗೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿದ್ದರೂ ಸಿದ್ಧರಾಮಯ್ಯ ಕೊಲೆಗಾರ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಕಾರಣ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಗೃಹ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.