By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಜಾತಿಗಣತಿಗೆ ಗೈರಾದರೆ FIR
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಜಾತಿಗಣತಿಗೆ ಗೈರಾದರೆ FIR
BengaluruKarnataka

ಜಾತಿಗಣತಿಗೆ ಗೈರಾದರೆ FIR

Team Varthaman
Last updated: October 4, 2025 6:47 PM
Team Varthaman
Published: October 4, 2025
Share
SHARE
  • ನಿಯೋಜಿತ ಸಿಬ್ಬಂದಿಗೆ ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು (ಜಾತಿ ಗಣತಿ) ಶೀಘ್ರ ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು (ಜಾತಿ ಗಣತಿ) ಶೀಘ್ರ ಪೂರ್ಣಗೊಳಿಸಲು ಮುಂದಾಗಿರುವ ಸರ್ಕಾರ, ಅರಣ್ಯ, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಿದೆ. ಸಮೀಕ್ಷೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಹಾಜರಾಗದಿದ್ದರೆ ಎಫ್‌ಐಆರ್ ದಾಖಲಿಸಿ ಕ್ರಮಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ ಪೋರ್ಟಲ್‌ನಲ್ಲಿ ಲಭ್ಯವಿರುವ ಮಾಹಿತಿಯನ್ನು ಬಳಸಿಕೊಂಡು ಸರ್ಕಾರಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ, ಪ್ರತ್ಯೇಕ ಸಂದೇಶ ಹಾಗೂ ಇ-ಮೇಲ್ ಗಳನ್ನು ರವಾನಿಸಿದೆ. ಸಂದೇಶದಲ್ಲಿ ಅಕ್ಟೋಬರ್ 3ರಂದು ತರಬೇತಿಯಲ್ಲಿ ಭಾಗವಹಿಸಲು ಮತ್ತು ಅಕ್ಟೋಬರ್ 4ರಿಂದ ಜನಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಸಿಬ್ಬಂದಿಗೆ ಆದೇಶಿಸಿದೆ. ಸಮೀಕ್ಷೆಗೆ ಹಾಜರಾಗದೆ ಇದ್ದರೆ, ಬಿಎನ್‌ಎಸ್’ನ ಸೆಕ್ಷನ್ 223ರ ಅಡಿಯಲ್ಲಿ ನೌಕರರ ವಿರುದ್ಧ ಎಫ್‌ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು ಲಿಖಿತವಾಗಿ ಒಪ್ಪಿಗೆ ನೀಡದ ಹೊರತು ಯಾವುದೇ ವಿನಾಯಿತಿಗಳನ್ನು ನೀಡುವುದಿಲ್ಲ ಎಂದೂ ತಿಳಿಸಿದೆ.

Join WhatsApp Group

ಸರ್ಕಾರದ ಈ ಸೂಚನೆ ಸರ್ಕಾರಿ ಅಧಿಕಾರಿಗಳಲ್ಲಿ ಕಳವಳವನ್ನುಂಟು ಮಾಡಿದೆ. ಜನಗಣತಿಗಾಗಿ ಎಲ್ಲಾ ಕಾಯಂ ಸಿಬ್ಬಂದಿಯನ್ನು ನಿಯೋಜನೆಗೊಳಿಸಿರುವುದರಿಂದ, ಸರ್ಕಾರಿ ಕೆಲಸವನ್ನು ಗುತ್ತಿಗೆ ನೌಕರರೇ ಮಾಡುವಂತಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದುರ.

ಅರಣ್ಯ ಇಲಾಖೆ ಸಿಬ್ಬಂದಿಗೆ ಚುನಾವಣಾ ಕರ್ತವ್ಯ ಸೇರಿದಂತೆ ಇತರೆ ಕರ್ತವ್ಯಗಳಿಂದ ವಿನಾಯಿತಿ ನೀಡಲಾಗಿದೆ. ಆದರೂ ಈಗ ಜಾತಿ ಗಣತಿಗೆ ನಿಯೋಜನೆಗೊಳಿಸಲಾಗಿದೆ. ಮಾನವ- ಪ್ರಾಣಿ ಸಂಘರ್ಷ ಅಥವಾ ಯಾವುದೇ ಅಹಿತಕರ ಘಟನೆ ನಡೆದರೆ, ನಾವು ಜವಾಬ್ದಾರರಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯುತ್ತಿದ್ದೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾವಲುಗಾರರು, ವೀಕ್ಷಕರು, ರೇಂಜ್ ಫಾರೆಸ್ಟ್ ಅಧಿಕಾರಿಗಳು, ಉಪ ಆರ್‌ಎಫ್‌ಒ, ಬೇಟೆ ನಿಗ್ರಹ ತಂಡಗಳು, ಚಿರತೆ ಮತ್ತು ಆನೆ ಕಾರ್ಯಪಡೆ ಸಿಬ್ಬಂದಿ ಸೇರಿದಂತೆ ಎಲ್ಲಾ ಸಿಬ್ಬಂದಿಯನ್ನು ಜನಗಣತಿ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ಸಮೀಕ್ಷೆ ಬಳಿಕ ಕರ್ತವ್ಯ ನಿರ್ವಹಿಸುವಂತೆ ಪಾಲಿಕೆ ಸಲಹೆ ನೀಡಿದೆ. ಆದರೆ, ಅರಣ್ಯ ಇಲಾಖೆಯ ಕೆಲಸಗಳು ಕುರ್ಚಿ ಮೇಲೆ ಕುಳಿತು ಮಾಡುವಂತಹ ಕೆಲಸವಲ್ಲ. ಗ್ರೌಂಡ್ ವರ್ಕ್ ಆಗಿರುತ್ತದೆ ಎಂದು ನೌಕರರು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳೂ ಕೂಡ ಇದೇ ರೀತಿಯ ಕಳವಳ ವ್ಯಕ್ತಪಡಿಸಿದ್ದಾರೆ. ತಂತ್ರಜ್ಞರು, ಔಷಧಿಕಾರರು, ಕ್ಲೆರಿಕಲ್ ಮತ್ತು ತಾಂತ್ರಿಕ ಸಿಬ್ಬಂದಿ ಸೇರಿದಂತೆ ಸಿಬ್ಬಂದಿಯನ್ನು ಜನಗಣತಿಗಾಗಿ ನಿಯೋಜಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಹಲವು ಸಮಸ್ಯೆಗಳಿವೆ. ಸಾಕಷ್ಟು ದೂರುಗಳೂ ಇವೆ. ಇದೀಗ ಕರ್ತವ್ಯದಿಂದ ಸಿಬ್ಬಂದಿಗಳನ್ನು ದೂರಾಗಿಸುವುದರಿಂದ ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. ಈಗಾಗಲೇ ಸಿಬ್ಬಂದಿ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ, ವಿನಾಯಿತಿಗಾಗಿ ಮುಖ್ಯ ಕಾರ್ಯದರ್ಶಿಗೆ ಹಸ್ತಾಂತರಿಸಲಾಗುವುದು ಎಂದು ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ದಸರಾ ರಜೆಯ ನಂತರ ಶಾಲೆಗಳು ಮತ್ತೆ ಆರಂಭವಾಗಲಿದೆ. ಪರಿಸ್ಥಿತಿ ನಿಭಾಯಿಸುವುದು ಕಷ್ಟಕರ. ಸಮೀಕ್ಷೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ರಜಾ ದಿನಗಳನ್ನು ರದ್ದುಪಡಿಸಲಾಗಿದೆ. ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಲು, ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮಾತ್ರ ಬಳಸಿಕೊಳ್ಳಬೇಕೆಂದು ನಾವು ಮನವಿ ಮಾಡಿದ್ದೇವೆ. ಆದರೂ ಮಧ್ಯಮ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಜನಗಣತಿಗೆ ನಿಯೋಜಿಸಲಾಗಿದೆ. ಎಲ್ಲಾ ಸರ್ಕಾರಿ ಕೆಲಸಗಳಿಗೆ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಕ್ಷಕರನ್ನು ಬಳಸಲಾಗುತ್ತದೆ.ಇದನ್ನು ಓದಿ –ರೋಹಿತ್ ಶರ್ಮಾ ನಾಯಕನಾಗಿ ಯುಗಾಂತ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿ, ಸರ್ಕಾರಿ ನೌಕರರನ್ನು ಒಳಗೊಳ್ಳುವ ಬಗ್ಗೆ ಸರ್ಕಾರಿ ಆದೇಶಗಳು ಸ್ಪಷ್ಟವಾಗಿವೆ. ಎರಡು ವಾರಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕನಿಷ್ಠ 20,000 ಸಿಬ್ಬಂದಿ ಅಗತ್ಯವಿದೆ. ಸರ್ಕಾರಿ ಸಿಬ್ಬಂದಿ ಭಾಗಿಯಾಗಿದರೆ ಸಮೀಕ್ಷೆಯು ವಿಶ್ವಾಸಾರ್ಹತೆಯನ್ನು ಖಚಿತಪಡಿಸುತ್ತದೆ ಎಂದು ತಿಳಿಸಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಅನ್ನಭಾಗ್ಯ ಯೋಜನೆಗೆ ಹೊಸ ರೂಪು
ಮಂಡ್ಯ: ಜನಿವಾರ ತೆಗೆಸಿದ ಘಟನೆಗೆ ಬ್ರಾಹ್ಮಣರ ಆಕ್ರೋಶ, ಪ್ರತಿಭಟನೆ
ಮಂಡ್ಯ: ಭೀಕರ ಅಪಘಾತ – ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರ ದುರ್ಮರಣ
ಡೈಮಂಡ್ ಲೀಗ್‌ ನಲ್ಲಿ ಇತಿಹಾಸ: 90 ಮೀ. ಎಸೆದ ನೀರಜ್ ಚೋಪ್ರಾ
ಬ್ರಹ್ಮಾಂಡದ ಮೂಲ ಶಕ್ತಿ ಕೂಷ್ಮಾಂಡ ದೇವಿ
TAGGED:BengalurubreakingnewsFIRKarnataka Govtlatestnewsಜಾತಿ ಗಣತಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ArticlesTrending

ಶೋಷಣೆಯ ಮತ್ತೊಂದು ಮುಖ 

Team Varthaman
Team Varthaman
April 28, 2025
ಸಿಎಂ ತವರು ಜಿಲ್ಲೆಯಲ್ಲೇ 2 ಕೋಟಿ ಮೌಲ್ಯದ ನಕಲಿ ತಂಬಾಕು ವಶಕ್ಕೆ
ನದಿಯಲ್ಲಿ ಈಜಲು ಹೋದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು
₹1 ಲಕ್ಷ ಲಂಚ ಸ್ವೀಕರಿಸಿದ PI ಮತ್ತು PSI ಲೋಕಾಯುಕ್ತ ಬಲೆಗೆ
ಇಂದಿನ ಬದುಕಿಗೆ ಗೀತೆಯ ಅವಶ್ಯಕತೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?