ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಣ್ಣ ದೂರು ನೀಡದೇ ಇದ್ದರೆ, ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜಣ್ಣ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು. ಅವರಿಗೋಸ್ಕರ ಬಹಳಷ್ಟು ಆಪ್ತರು ಇದ್ದಾರೆ, ನನ್ನ ಹೊರತಾಗಿಯೂ ಹಲವರು ಅವರೊಡನೆ ಇದ್ದಾರೆ. ಅವರು ಯಾರೊಂದಿಗೆ ಏನೆಲ್ಲಾ ಮಾತನಾಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ,” ಎಂದರು.
ಹನಿಟ್ರ್ಯಾಪ್ ವಿಚಾರ ಬೋಗಸ್ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಈ ಬಗ್ಗೆ ನಾನು ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಾಜಣ್ಣ ದಿನಪೂರ್ತಿ ನನ್ನ ಜೊತೆಯೇ ಇದ್ದರು, ಆದರೆ ಅವರು ಈ ವಿಷಯದಲ್ಲಿ ಏನೂ ಹೇಳಿಲ್ಲ,” ಎಂದು ಸ್ಪಷ್ಟಪಡಿಸಿದರು.
ಹನಿಟ್ರ್ಯಾಪ್ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗದಿದ್ದರೆ ತನಿಖೆಗೆ ಅವಕಾಶ ಇಲ್ಲ ಎಂಬುದಾಗಿ ಗೃಹಸಚಿವರು ಅಭಿಪ್ರಾಯಪಟ್ಟಿದ್ದಾರೆ.