ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿರುವುದರ ನಡುವೆ ಕೊರೋನಾಗೆ ಬೆಂಗಳೂರಿನಲ್ಲಿ ಮೊದಲ ಬಲಿ ವರದಿಯಾಗಿದೆ.
ವೈಟ್‌ಫೀಲ್ಡ್ ಮೂಲದ 84 ವರ್ಷದ ವೃದ್ಧರೊಬ್ಬರು ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ.
ವೃದ್ಧರು ಉಸಿರಾಟದ ತೊಂದರೆ ಹಾಗೂ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಮುಂದುವರಿದಿದ್ದರೂ, ಅವರು ಸಾವನ್ನಪ್ಪಿದ್ದಾರೆ.ಇದನ್ನು ಓದಿ –ಭಾರತದ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಹೊಸ ನಾಯಕರು
ಇದರಿಂದ ನಗರದಲ್ಲಿ ಕೊರೋನಾ ಮರು ಪ್ರಚಲನಕ್ಕೆ ಸಂಬಂಧಿಸಿದಂತೆ ಮೊದಲ ಸಾವು ದಾಖಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಆರೋಗ್ಯ ಇಲಾಖೆ ಮತ್ತೆ ಸಲಹೆ ನೀಡಿದೆ.