- ಪತಿ ಕುಟುಂಬದ ವಿರುದ್ಧ ಕೊಲೆ ಆರೋಪ
ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂ ಪ್ರದೇಶದಲ್ಲಿ ನಡೆದಿದ್ದು, ಮೃತೆಯ ಪೋಷಕರು ಪತಿ ಹಾಗೂ ಅವರ ಕುಟುಂಬದ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.
ಮೃತರನ್ನು ಸಂಧ್ಯಾ (30) ಎಂದು ಗುರುತಿಸಲಾಗಿದ್ದು, ಅವರು ಹುಣಸೂರು ಪುರಸಭೆಯ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿಯಾಗಿದ್ದಾರೆ. ಸಂಧ್ಯಾ ಅವರು ಮೈಸೂರಿನ ಸರಸ್ವತಿಪುರಂನ ಜವರೇಗೌಡ ಉದ್ಯಾನವನದ ಸಮೀಪ ವಾಸವಿದ್ದರು.

ಸಂಧ್ಯಾ ಅವರನ್ನು ಟಿ.ಕೆ. ಬಡಾವಣೆಯ ನಿವಾಸಿ ಮಹದೇವ್ ಅವರ ಪುತ್ರ ಅಕ್ಷಯ್ ಅವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ಕೆಲವು ದಿನಗಳಿಂದ ದಂಪತಿಯ ನಡುವೆ ಕುಟುಂಬ ಕಲಹ ನಡೆಯುತ್ತಿತ್ತು ಎನ್ನಲಾಗಿದೆ.
ಈ ಮಧ್ಯೆ ಸಂಧ್ಯಾ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕುಟುಂಬಸ್ಥರಿಗೆ ಆಘಾತ ಉಂಟುಮಾಡಿದೆ. ಮೃತೆಯ ಪೋಷಕರು ಈ ಸಾವಿನ ಹಿಂದೆ ಪತಿ ಕುಟುಂಬದ ಕೈವಾಡವಿದೆ ಎಂದು ಆರೋಪಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಇದನ್ನು ಓದಿ –ಮುಂಗಾರು ಅಬ್ಬರ: 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.








