ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ನಿಧನರಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಚೆನ್ನಮ್ಮ ದೇವೇಗೌಡ ಅವರ ನಿಧನದ ಸುದ್ದಿ ರಾಜಕೀಯ ವಲಯದಲ್ಲಿ ದುಃಖದ ವಾತಾವರಣ ಮೂಡಿಸಿದ್ದು, ಅವರು ಹಲವು ವರ್ಷಗಳಿಂದ ದೇವೇಗೌಡ ಅವರ ಕುಟುಂಬದೊಂದಿಗೆ ಸಾರ್ವಜನಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಇದನ್ನು ಓದಿ –ಲಂಚ ಪಡೆಯುವಾಗ ಎಪಿಪಿ ಬಂಧನ
ಕುಟುಂಬದ ಸದಸ್ಯರು, ರಾಜಕೀಯ ಮುಖಂಡರು ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದು, ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಯ ಕುರಿತು ಕುಟುಂಬದವರು ಶೀಘ್ರದಲ್ಲೇ ಮಾಹಿತಿ ನೀಡುವ ನಿರೀಕ್ಷೆಯಿದೆ.








