ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವರ್ಷ 2024 ಫೆಬ್ರವರಿ 15ರಂದು ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಹಿನ್ನೆಲೆ ದೇವೇಗೌಡ ಅವರನ್ನು ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.ಇದನ್ನು ಓದಿ –ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಹೆಚ್ಚಿಸಬೇಕು: ಸಿಎಂ
ಹೆಚ್‌ಡಿ ದೇವೇಗೌಡ 92 ವರ್ಷ ವಯಸ್ಸಿನಲ್ಲಿದ್ದಾರೆ ಮತ್ತು ವಯೋಸಹಜ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೂ ಅವರು ಸಕ್ರಿಯ ರಾಜಕಾರಣದಲ್ಲಿದ್ದಾರೆ ಮತ್ತು ರಾಜ್ಯಸಭೆ ಸದಸ್ಯರಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸಾರ್ವಜನಿಕ ಭೇಟಿ, ಸಂತ್ರಸ್ಥರ ಕುಟುಂಬ ಭೇಟಿ ಮತ್ತು ಲೋಕಸಭೆ ಚುನಾವಣೆಗೆ ಮೈತ್ರಿ ರೂಪಿಸುವಂತಹ ಕಾರ್ಯಗಳಲ್ಲಿ ಅವರು ಭಾಗವಹಿಸಿದ್ದರು.








