ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯದ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ಮಹತ್ವದ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಎಲ್‌ಕೆಜಿಯಿಂದ ಪಿಯುಸಿ ವರೆಗೆ ಸರ್ಕಾರಿ ಶಾಲೆಗಳಲ್ಲಿ (Karnataka Public Schools) ಓದುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ.
ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಎಕ್ಸ್ (ಪೂರ್ವದ ಟ್ವಿಟ್ಟರ್) ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, “ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಉತ್ತಮ ಹಾಜರಾತಿ ಮತ್ತು ಶೈಕ್ಷಣಿಕ ಪ್ರಗತಿಗೆ ಈ ಉಚಿತ ಬಸ್ ಸೇವೆ ಸಹಾಯಕವಾಗಲಿದೆ. ಸರ್ಕಾರದ ಈ ತೀರ್ಮಾನ ಬಡವರ ಮಕ್ಕಳಿಗೆ ಶೈಕ್ಷಣಿಕ ಹಾಗೂ ಆರ್ಥಿಕ ಬಲ ನೀಡಲಿದೆ” ಎಂದು ಹೇಳಿದ್ದಾರೆ.
ಈ ಉಚಿತ ಬಸ್ ಯೋಜನೆ, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಾಯ ಮಾಡುವುದರ ಜೊತೆಗೆ, ಹೆಚ್ಚಿನ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ಆಕರ್ಷಿಸಲು ಸಹ ಕಾರಣವಾಗಲಿದೆ. ವಿಶೇಷವಾಗಿ ಹಳ್ಳಿಗಳಲ್ಲಿರುವ ಬಡ ಮಕ್ಕಳಿಗೆ ಶಾಲೆ ಸೇರುವಲ್ಲಿ ಅನುಕೂಲವಾಗಲಿದೆ.
ಇದನ್ನು ಓದಿ –ಲಂಚ ಪಡೆಯುತ್ತಿದ್ದ ವೈದ್ಯಕೀಯ ಅಧೀಕ್ಷಕ ಲೋಕಾಯುಕ್ತ ಬಲೆಗೆ
ಸರ್ಕಾರಿ ಶಾಲಾ ಮಕ್ಕಳಿಗೆ ಈ ರೀತಿಯ ಸೌಲಭ್ಯ ಕಲ್ಪಿಸುವ ಮೂಲಕ ಸರ್ಕಾರ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಹಾಕಿದ್ದು, ಶಾಲಾ ಹಾಜರಾತಿ ಹೆಚ್ಚಿಸಲು ನಿರ್ಣಾಯಕ ಕ್ರಮ ಕೈಗೊಂಡಿದೆ.