ನವದೆಹಲಿ: ರಸ್ತೆ ಅಪಘಾತಕ್ಕೊಳಗಾದವರಿಗೆ ತುರ್ತು ಚಿಕಿತ್ಸೆಯಲ್ಲಿ ಮಹತ್ವದ ಸೌಲಭ್ಯ ಒದಗಿಸಲು ಸುಪ್ರೀಂ ಕೋರ್ಟ್ ನೇಮಿತ ಸಮಿತಿ ಶಿಫಾರಸು ಮಾಡಿದೆ. ಅಪಘಾತದ ನಂತರದ ಮೊದಲ 48 ಗಂಟೆಗಳ ‘ಗೋಲ್ಡನ್ ಅವರ್’ ಅವಧಿಯಲ್ಲಿ ಗರಿಷ್ಠ ₹1.5 ಲಕ್ಷದವರೆಗೆ ನಗದುರಹಿತ ಉಚಿತ ಚಿಕಿತ್ಸೆ ನೀಡಲು ಸಲಹೆ ನೀಡಲಾಗಿದೆ.
ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿಯು ರಸ್ತೆ ಸುರಕ್ಷತೆ ಕುರಿತು ಹಲವು ಪ್ರಮುಖ ಅಂಶಗಳನ್ನು ಮುಂದಿರಿಸಿದೆ. ಅಪಘಾತದ ಬಳಿಕ ಹಣದ ಕೊರತೆಯಿಂದ ಯಾರೂ ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ದೇಶದಾದ್ಯಂತ ಪ್ರತಿಯೊಬ್ಬ ಅಪಘಾತ ಸಂತ್ರಸ್ತನಿಗೂ ₹1.5 ಲಕ್ಷದವರೆಗೆ ಉಚಿತ ವೈದ್ಯಕೀಯ ಸೇವೆ ಒದಗಿಸುವಂತೆ ಶಿಫಾರಸು ಮಾಡಲಾಗಿದೆ. ಈ ಸೌಲಭ್ಯವನ್ನು ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಸಮೀಪದ ಖಾಸಗಿ ಆಸ್ಪತ್ರೆಗಳಲ್ಲಿಯೂ ನೀಡುವ ವ್ಯವಸ್ಥೆ ಮಾಡಬೇಕೆಂದು ಸಮಿತಿ ಸೂಚಿಸಿದೆ.ಇದನ್ನು ಓದಿ –ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ; ಮಾನಸಿಕ ಖಿನ್ನತೆ ಕಾರಣ ಎಂದು SIT ನಿರ್ಣಯ
ಈ ಯೋಜನೆಗೆ ಅಗತ್ಯವಿರುವ ಹಣವನ್ನು ‘ಮೋಟಾರ್ ವಾಹನ ಅಪಘಾತ ನಿಧಿ’ಯಿಂದ ಬಳಸಿಕೊಳ್ಳಲು ಸಲಹೆ ನೀಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸಹಕಾರದೊಂದಿಗೆ ದೇಶಾದ್ಯಂತ ಈ ಯೋಜನೆಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ.








