ನವದೆಹಲಿ: ಕೇಂದ್ರ ಸರ್ಕಾರ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿದೆ. ಕಳೆದ ಎರಡು ವಾರಗಳಲ್ಲಿ ನಾಲ್ಕನೇ ಬಾರಿಗೆ ಇಂಧನ ದರ ಹೆಚ್ಚಳವಾಗಿದೆ.
ಸೋಮವಾರ ಪೆಟ್ರೋಲ್ ದರ ಲೀಟರ್‌ಗೆ 2.61 ರೂ. ಹಾಗೂ ಡೀಸೆಲ್ ದರ 2.71 ರೂ. ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110.89 ರೂ. ಮತ್ತು ಡೀಸೆಲ್ ಬೆಲೆ 98.80 ರೂ.ಗೆ ತಲುಪಿದೆ.
ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದರಿಂದ ಸರ್ಕಾರಿ ತೈಲ ಕಂಪನಿಗಳು ಹಂತ ಹಂತವಾಗಿ ದರ ಹೆಚ್ಚಿಸುತ್ತಿವೆ.
ಮೇ 15ರಂದು ಮೊದಲ ಬಾರಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿತ್ತು. ಬಳಿಕ ಮೇ 23ರಂದು ಮತ್ತೆ ದರ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಬೆಲೆ ಹೆಚ್ಚಳವಾಗಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪದೇ ಪದೇ ಇಂಧನ ದರ ಏರಿಕೆ ಮಾಡುತ್ತಿರುವುದರಿಂದ ಜನರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.








