ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಿಗೆ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡಿದೆ.
ಈ ಸಂಬಂಧ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಡಿಸೆಂಬರ್ ಅಂತ್ಯದವರೆಗೆ ಅವಕಾಶ ನೀಡುವಂತೆ ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿ, ವಿಶೇಷ ಮತದಾರರ ತಿದ್ದುಪಡಿ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿ ಗಡುವನ್ನು ವಿಸ್ತರಿಸಿದೆ.
ವಿಚಾರಣೆ ವೇಳೆ, “ಡಿಸೆಂಬರ್‌ನಲ್ಲಿ ಮತ್ತೆ ಹೊಸ ಕಾರಣಗಳನ್ನು ಮುಂದಿಟ್ಟು ಕಾಲಾವಕಾಶ ಕೇಳಬೇಡಿ” ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರ, ಜನವರಿಯೊಳಗೆ ಚುನಾವಣೆ ಪೂರ್ಣಗೊಳಿಸಿರುವ ಕುರಿತು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸುವುದಾಗಿ ಭರವಸೆ ನೀಡಿತು.ಇದನ್ನು ಓದಿ –ಇ-ಸ್ವತ್ತು ಸಮಸ್ಯೆಗೆ ಸಮಿತಿ ರಚನೆ:ಸಚಿವ ಈಶ್ವರ್ ಖಂಡ್ರೆ
ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಚುನಾವಣೆಗೆ ಹೆಚ್ಚುವರಿ ಸಮಯ ಅಗತ್ಯವಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.







