ಬೆಂಗಳೂರು: ದೇವರು ವರವನ್ನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ಸಿದ್ದರಾಮಯ್ಯನವರು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭಾವುಕ ಸಂದೇಶ ಹಂಚಿಕೊAಡಿದ್ದಾರೆ.
ಸಿಎA ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೆ ಎಕ್ಸ್ ನಲ್ಲಿ ಸುದೀರ್ಘ ಸಂದೇಶ ಹಂಚಿಕೊAಡಿರುವ ಅವರು ಸಿದ್ದರಾಮಯ್ಯ ಅವರ ಗುಣಗಾನ ಮಾಡಿದ್ದಾರೆ. ಅಲ್ಲದೆ, ಸಿದ್ದು ಹಾಗೂ ತಮ್ಮ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗುವ ವಿಶೇಷ ವಿಡಿಯೋವನ್ನೂ ಹಂಚಿಕೊAಡಿದ್ದಾರೆ.
ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ.
ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.
ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.








