ಬೆಂಗಳೂರು: ಶಿಕ್ಷಕ ಹುದ್ದೆಗೆ ಆಸೆಪಟ್ಟು ಕಾಯುತ್ತಿದ್ದವರಿಗೆ ರಾಜ್ಯ ಸರ್ಕಾರದಿಂದ ಖುಷಿಯ ಸುದ್ದಿ—2025-26ನೇ ಶೈಕ್ಷಣಿಕ ಸಾಲಿಗೆ 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.
ಈ ನೇಮಕಾತಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ತುಂಬುವ ಉದ್ದೇಶದಿಂದ ಮಾಡಲಾಗುತ್ತಿದೆ. ಈ ಕ್ರಮದಂತೆ, ಪ್ರಾಥಮಿಕ ಶಾಲೆಗಳಿಗೆ 45,000 ಅತಿಥಿ ಶಿಕ್ಷಕರು ಮತ್ತು ಪ್ರೌಢಶಾಲೆಗಳಿಗೆ 6,000 ಅತಿಥಿ ಶಿಕ್ಷಕರು, ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ.
ಈ ಅತಿಥಿ ಶಿಕ್ಷಕರ ನೇಮಕಾತಿ ನೇರ ನಿಯೋಜನೆಯ ರೂಪದಲ್ಲಿ ನಡೆಯಲಿದ್ದು, ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ. ಶಾಲೆಗಳ ಉದ್ಘಾಟನೆಯಾದ 2025ರ ಮೇ 29ರಿಂದಲೇಕಿ ಈ ಶಿಕ್ಷಕರನ್ನು ಶಾಲೆಗಳಲ್ಲಿ ನೇಮಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಾಠದ ಪ್ರಕ್ರಿಯೆ ಖಚಿತಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ.ಇದನ್ನು ಓದಿ –IPL ಹೆಸರಿನಲ್ಲಿ ಯುವ ಕ್ರಿಕೇಟಿಗನಿಗೆ 23 ಲಕ್ಷ ವಂಚನೆ
ಶಾಲಾ ಶಿಕ್ಷಣ ಇಲಾಖೆ ನೀಡಿದ ಪ್ರಸ್ತಾವನೆ ಆಧರಿಸಿ ಈ ತಾತ್ಕಾಲಿಕ ನಿಯೋಜನೆ ಪ್ರಕ್ರಿಯೆಗೆ ಅನುಮತಿ ನೀಡಿದ್ದು, ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಳ್ಳುವ ಹಾಗೂ ಶಿಕ್ಷಕರ ಕೊರತೆಯನ್ನು ತಕ್ಷಣ ನಿಭಾಯಿಸುವ ದೃಷ್ಟಿಯಿಂದ ಸರ್ಕಾರ ಈ ಮಹತ್ವದ ಹೆಜ್ಜೆ ಇಟ್ಟಿದೆ.