ಹಾಸನದಲ್ಲಿ 1.5 ತಿಂಗಳಲ್ಲಿ 30 ಸಾವು
ಹಾಸನ: ಹೃದಯಾಘಾತದಿಂದ ಸಾವಿನ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿವೆ. ಇತ್ತೀಚೆಗೆ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಂದೂವರೆ ತಿಂಗಳಲ್ಲಿ ಈ ಕಾಯಿಲೆಯಿಂದ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿದೆ.
ಆಲೂರು ತಾಲ್ಲೂಕಿನ ಕಲ್ಲಾರಿ ಗ್ರಾಮದ ನಿವಾಸಿ ಸಂತೋಷ್ ಕಾರಗೋಡು (41) ಎಂಬವರು ಮೃತರಾದವರು. ಅವರು ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು.
ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಸಂತೋಷ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಬೆಳಗ್ಗೆ ಎದ್ದಿಲ್ಲದ ಕಾರಣ ಕುಟುಂಬಸ್ಥರು ಆತಂಕಗೊಂಡು ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ವೈದ್ಯರು ಮೃತವೆಂದು ಘೋಷಿಸಿದರು.
ಹಿಂದೆಯೂ ಒಮ್ಮೆ ಹೃದಯಾಘಾತ ಉಂಟಾಗಿ ಅವರು ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ
ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು ಪ್ರಕರಣಗಳು ಜಿಲ್ಲೆಯ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕರಲ್ಲಿ ಭಯ ಮೂಡಿಸುತ್ತಿವೆ. ವೈದ್ಯರು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಸಮಯಕ್ಕೆ ಸರಿಯಾದ ತಪಾಸಣೆ ಮತ್ತು ಆರೋಗ್ಯದ ಮೇಲ್ವಿಚಾರಣೆಗೆ ಗಮನಹರಿಸಲು ಸಲಹೆ ನೀಡಿದ್ದಾರೆ.