ಮಂಡ್ಯ: ಸುಮಾರು 100 ದಿನಗಳ ವಿಶ್ರಾಂತಿಯ ಬಳಿಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಇಂದು ತಮ್ಮ ಸ್ವಕ್ಷೇತ್ರವಾದ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅವರು ಸಾರ್ವಜನಿಕ ಜೀವನದಿಂದ ದೂರವಾಗಿದ್ದರು. ಇಂದು ಮಂಡ್ಯದ ಪೇಟೆ ಬೀದಿಯಲ್ಲಿ ನಿರ್ಮಿತವಾದ ಜಯಚಾಮರಾಜೇಂದ್ರ ಒಡೆಯರ್ ಮಾರುಕಟ್ಟೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ಮೂರು ತಿಂಗಳ ಹಿಂದೆ ಕುಮಾರಸ್ವಾಮಿ ಅವರು ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆಯನ್ನು ನಡೆಸಿದ್ದರು. ಅದರ ನಂತರ ಅವರಿಗೆ ಆರೋಗ್ಯ ಸಮಸ್ಯೆಗಳು ತಲೆದೋರಿದ ಕಾರಣ ವಿಶ್ರಾಂತಿಗೆ ಒಳಗಾಗಿದ್ದರು. ಈ ಅವಧಿಯಲ್ಲಿ ಅವರ ದಿಢೀರ್ ತೂಕ ಇಳಿಕೆ ಮತ್ತು ದೇಹದ ಸೊರಗು ಕಾರ್ಯಕರ್ತರಲ್ಲಿ ಆತಂಕ ಮೂಡಿಸಿತ್ತು.ಇದನ್ನು ಓದಿ –ಬಿ ಖಾತೆದಾರರಿಗೆ ಎ ಖಾತೆ ಭಾಗ್ಯ — ರಾಜ್ಯ ಸರ್ಕಾರದಿಂದ 6ನೇ ಗ್ಯಾರಂಟಿ ಜಾರಿಗೆ
ಇದೀಗ ಆರೋಗ್ಯದಲ್ಲಿ ಸುಧಾರಣೆ ಕಂಡುಕೊಂಡಿರುವ ಕುಮಾರಸ್ವಾಮಿ ಅವರು 100 ದಿನಗಳ ಬಳಿಕ ಪುನಃ ಸಾರ್ವಜನಿಕ ಜೀವನಕ್ಕೆ ಮರಳುತ್ತಿದ್ದಾರೆ. ಮಂಡ್ಯದಲ್ಲಿ ಅವರ ಆಗಮನದ ನಿರೀಕ್ಷೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ.








