ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಪಚ್ಚೆದೊಡ್ಡಿ ಗ್ರಾಮದ ಹತ್ತಿರ ಹುಲಿಯ ಅರ್ಧ ಕಳೆಬರ ಪತ್ತೆಯಾಗಿದೆ. ತಲೆ ಮತ್ತು ಮುಂಗಾಲುಗಳು ಮಾತ್ರ ಪತ್ತೆಯಾಗಿದ್ದು, ಉಳಿದ ದೇಹದ ಭಾಗಗಳು ನಾಪತ್ತೆಯಾಗಿರುವುದರಿಂದ ಕಳ್ಳ ಬೇಟೆಯ ಶಂಕೆ ವ್ಯಕ್ತವಾಗಿದೆ.
ಇತ್ತೀಚೆಗೆ ಇದೇ ಜಿಲ್ಲೆಯ ಮಾದಪ್ಪನ ಬೆಟ್ಟದಲ್ಲಿ 5 ಹುಲಿಗಳಿಗೆ ವಿಷ ಉಣಿಸಿ ಕೊಲೆ ಮಾಡಿದ ಭೀಕರ ಘಟನೆ ನಡೆದಿದ್ದು, ಈಗ ಮತ್ತೆ ಹುಲಿಯ ನಿಗೂಢ ಸಾವು ವರದಿಯಾಗಿರುವುದು ಆತಂಕ ಹೆಚ್ಚಿಸಿದೆ.
Contents
ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದು, ಹುಲಿ ಕಳ್ಳ ಬೇಟೆಗೆ ಬಲಿಯಾದ ಸಾಧ್ಯತೆ ಹೆಚ್ಚು ಎಂದು ತಿಳಿಸಿದ್ದಾರೆ.
ತನಿಖೆ ಆದೇಶ
ಹುಲಿಯ ಸಾವಿನ ಕುರಿತು ಸತ್ಯಾಂಶ ತಿಳಿಯಲು ಉನ್ನತ ಮಟ್ಟದ ತನಿಖೆಗೆ ಈಶ್ವರ ಖಂಡ್ರೆ ಆದೇಶ ನೀಡಿದ್ದು , ಪಿಸಿಸಿಎಫ್ ಸ್ಮಿತಾ ಬಿಜ್ಜುರು ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, 8 ದಿನಗಳೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.ಇದನ್ನು ಓದಿ –ರಾಜ್ಯದ 20 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ
ಅರಣ್ಯ ಸಚಿವರೂ ಸಹ ಹುಲಿ ಹಂತಕರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.








