ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸ್ ಠಾಣೆಯೊಳಗೇ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಮೊಹಮ್ಮದ್ ಝಕ್ರಿಯ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾಹಿತಿಯಂತೆ, ಮೊಹಮ್ಮದ್ ಝಕ್ರಿಯ ಅವರು ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದು, ಇತ್ತೀಚೆಗೆ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಬಸ್ ನಿಲ್ದಾಣದ ಬಳಿ ಕರ್ತವ್ಯ ಮುಗಿಸಿ ಠಾಣೆಗೆ ಮರಳಿದ ಅವರು, ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಸೆಲ್ ಪ್ರದೇಶದಲ್ಲಿ ನೇಣು ಬಿಗಿದುಕೊಂಡಿದ್ದಾರೆ .ಇದನ್ನು ಓದಿ –KSRTC ಬಸ್ – ಲಾರಿ ಡಿಕ್ಕಿ: ಚಾಲಕ ಸಾವು ,17 ಮಂದಿಗೆ ಗಾಯ
ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








