ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 10ರಿಂದ 12ರವರೆಗೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೆಚ್ಚಿನ ಗಾಳಿ ಒತ್ತಡದ ಪರಿಣಾಮ ಕಾರವಾರ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಮೀನುಗಾರಿಕೆ ಸ್ಥಗಿತಗೊಂಡಿದೆ.ಇದನ್ನು ಓದಿ –ಲಂಚ ಪಡೆಯುತ್ತಿದ್ದ ಅಧಿಕಾರಿ ‘ಲೋಕಾ’ ಬಲೆಗೆ
ಆಳ ಸಮುದ್ರಕ್ಕೆ ತೆರಳುವ ಪರ್ಶಿಯನ್ ಬೋಟ್‌ಗಳು ಬಂದರುಗಳಲ್ಲಿ ಲಂಗರು ಹಾಕಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.








