- 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು, ಮಾರ್ಚ್ 31: ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಬಿಸಿಲಿನ ತಾಪಮಾನ ಕಡಿಮೆಯಾಗಿದೆ. ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು:
ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮಳೆಯ ಮುನ್ಸೂಚನೆ:
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರ್ಗಿ, ಬೀದರ್, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ.ಇದನ್ನು ಓದಿ –ಇಂದು ಪ್ರಥಮ PUC ಫಲಿತಾಂಶ ಪ್ರಕಟ
ಉಳಿದ ಪ್ರದೇಶಗಳಲ್ಲಿ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








