ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.
ನಿನ್ನೆ ಸಂಜೆಯಿಂದಲೇ ಬೆಂಗಳೂರಿನಲ್ಲಿ ಮಳೆ ನಿರಂತರ ಸುರಿಯುತ್ತಿದ್ದು, ಇಂದು ಕೂಡ ಅಬ್ಬರ ಮುಂದುವರಿಯಲಿದೆ.
ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.ಇದನ್ನು ಓದಿ –CM ಸಿದ್ದರಾಮಯ್ಯ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ – ನಿವೃತ್ತ ಯೋಧ ಬಂಧನ
ಹವಾಮಾನ ಇಲಾಖೆ ಪ್ರಕಾರ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿಯೂ ಮಳೆ ಮುಂದುವರಿಯುವ ನಿರೀಕ್ಷೆ ಇದೆ.