ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು (ಆ.13) ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಆದರೆ ನಾಳೆಯಿಂದ (ಆ.14) ಕರಾವಳಿ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಎಚ್ಚರಿಕೆ ನೀಡಲಾಗುವುದು.
ರಾಜ್ಯಾದ್ಯಂತ ಗುಡುಗು–ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ಜೋರಾಗುವ ಸಾಧ್ಯತೆಯೂ ಇದೆ.
ಬೆಂಗಳೂರಿನಲ್ಲಿಯೂ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ನಾಗರಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ.