- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ 4 ರಿಂದ 5 ದಿನಗಳ ಕಾಲ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಇಳಿಸುಡುಗಟ್ಟು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಮೇ 2 ರಿಂದ 8 ರ ವರೆಗೆ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಕೆಲ ಸಂದರ್ಭಗಳಲ್ಲಿ ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿಯೂ ಬೀಸುವ ಸಾಧ್ಯತೆ ಇದೆ.
ಅದೃಷ್ಟವಶಾತ್, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೇ 9ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯೂ ಇದೆ.ಇದನ್ನು ಓದಿ –ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಶಂಕಿತ ಉಗ್ರನ ಸಾವು
ಸಾರ್ವಜನಿಕರು ಎಚ್ಚರದಿಂದಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಕರೆ ನೀಡಿದೆ.