ಬೆಂಗಳೂರು, ಜುಲೈ 31: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡದ ಮಾಜಿ ಶಾಸಕ ವಿನಯ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ.
ಈ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ವಿನಯ ಕುಲಕರ್ಣಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಜೀವಾವಧಿ ಶಿಕ್ಷೆಯ ಜಾರಿಗೆ ತಡೆ ನೀಡಿದ್ದು, ಮಧ್ಯಂತರ ಜಾಮೀನನ್ನೂ ಮಂಜೂರು ಮಾಡಿದೆ.
ಇದೇ ವೇಳೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿಗೆ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ವಿಧಿಸಲಾಗಿದ್ದ ನಿರ್ಬಂಧವನ್ನೂ ಹೈಕೋರ್ಟ್ ರದ್ದುಪಡಿಸಿದೆ.ಇದನ್ನು ಓದಿ –ಯುಪಿಎಸ್ಸಿ ಮಾದರಿಯಲ್ಲಿ ಕೆಪಿಎಸ್ಸಿ ನೇಮಕ
ಪ್ರಕರಣದ ಮುಂದಿನ ವಿಚಾರಣೆ ನಡೆಯುವವರೆಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶ ಜಾರಿಯಲ್ಲಿರಲಿದೆ.








