ಬೆಂಗಳೂರು: ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರಕ್ಕೆ ಹೈಕೋರ್ಟ್ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ರಾಜ್ಯ ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
ಮುಷ್ಕರವನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿತು. ಮುಷ್ಕರವನ್ನು ತಕ್ಷಣ ಹಿಂಪಡೆಯುವಂತೆ ಜಂಟಿ ಕ್ರಿಯಾ ಸಮಿತಿಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದರು.
ನ್ಯಾಯಪೀಠವು ಸರ್ಕಾರವು ಸಾರಿಗೆ ಸಂಘಟನೆಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿತು.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಮತ್ತು ಅರೆ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.ಇದನ್ನು ಓದಿ –ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು
ದಿನಗೂಲಿ ಕಾರ್ಮಿಕರು, ರೋಗಿಗಳು, ವೃದ್ಧರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ಜನರು ಸಾರ್ವಜನಿಕ ಬಸ್ ಸೇವೆಯನ್ನೇ ಅವಲಂಬಿಸಿರುವುದರಿಂದ ಮುಷ್ಕರದಿಂದ ಜನಜೀವನ ಅಸ್ತವ್ಯಸ್ತವಾಗಲಿದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.








