ಬೆಂಗಳೂರು: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ನಡೆದಿದೆ.
ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಬೈಕ್ ಮತ್ತು ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಸರಣಿ ಡಿಕ್ಕಿಯಲ್ಲಿ ಒಂದೇ ಕಾರಿನಲ್ಲಿದ್ದ 6 ಮಂದಿ ಹಾಗೂ ಬೈಕ್ ಸವಾರ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತಕ್ಕೀಡಾದ ಎಕ್ಸ್ಯುವಿ 700 ಕಾರು (KA-03 NW-0138) ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.ಇದನ್ನು ಓದಿ –ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆಗೆ ಸಿಎಂ ಸಜ್ಜು
ಮೃತದೇಹಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.








