ಮೈಸೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುವುದಾಗಿ ಚಾಮುಂಡೇಶ್ವರಿ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಜಯಪುರ ಗ್ರಾಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಕ್ಷೇತ್ರದ ಜನರು ಹೇಳುವಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ನಾನು ಜೆಡಿಎಸ್‌ನಲ್ಲೇ ಇದ್ದೇನೆ, ಮುಂದೆಯೂ ಇರುತ್ತೇನೆ. ಟಿಕೆಟ್ ಕೊಡದಿದ್ದರೆ ಮತದಾರರು ಏನು ಹೇಳುತ್ತಾರೋ ಅದಕ್ಕೆ ಬದ್ಧನಾಗಿರುತ್ತೇನೆ. ನಿಮ್ಮ ಪ್ರೀತಿ, ಆಶೀರ್ವಾದವೇ ನನಗೆ ಮುಖ್ಯ ಎಂದು ಭಾವನಾತ್ಮಕವಾಗಿ ಮಾತನಾಡಿದರು.
ನನ್ನಿಂದ ಯಾವುದೇ ಸಹಾಯ ಪಡೆಯದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಆದರೆ ನಾನು ಬೆಳೆಸಿದವರೇ ನನ್ನ ವಿರುದ್ಧ ನಿಂತಿದ್ದಾರೆ. ಇದು ಹೊಸದಿಲ್ಲ, ಹಿಂದಿನಿಂದಲೂ ನಡೆಯುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನು ಓದಿ –ಇಂದಿನಿಂದ SSLC ಪರೀಕ್ಷೆ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು
ಇತ್ತೀಚೆಗೆ ಜೆಡಿಎಸ್ ಸಭೆಗಳಿಗೆ ಗೈರಾಗಿರುವ ಜಿಟಿಡಿ ಕುರಿತು ಪಕ್ಷದೊಳಗೆ ಚರ್ಚೆಗಳು ನಡೆದಿದ್ದು, ಕೆಲವು ಕಾರ್ಯಕ್ರಮಗಳು ಹಾಗೂ ಫ್ಲೆಕ್ಸ್‌ಗಳಲ್ಲಿ ಅವರ ಫೋಟೋ ಕಾಣಿಸದಿರುವುದು ಗಮನಾರ್ಹವಾಗಿದೆ. ಈ ಹಿನ್ನೆಲೆ ಅವರ ಭಾವನಾತ್ಮಕ ಹೇಳಿಕೆ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದೆ.








