ಮೈಸೂರು : ಉದ್ಯೋಗ ಮಾರುಕಟ್ಟೆಯಲ್ಲೀಗ ಸ್ಪರ್ಧೆ ಹೆಚ್ಚಿದೆ. ಸಾವಿರ ಹುದ್ದೇಗಳಿಗೆ ಲಕ್ಷ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ. ಕಠಿಣ ಪರಿಶ್ರಮವಿದ್ದರೆ ಇಂತಹ ಉದ್ಯೋಗಗಳನ್ನು ನೀವು ಪಡೆಯಬಹುದು ಎಂದು ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಐಎಎಸ್ ಹಾಗೂ ಕೆಎಎಸ್ ಪರೀಕ್ಷಾ ತರಬೇತಿಯ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಾವುದೇ ಜಾಬ್ ನೋಟಿಫಿಕೇಷನ್ ಪ್ರಕಟವಾಗಲಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಠಿಣ ತಯಾರಿ ನಡೆಸಬೇಕು. ಸರ್ಕಾರಿ ನೌಕರಿಪಡೆಯುವ ಮೂಲ ಗುರಿ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
ನಾನು ಕೂಡ ಹಳ್ಳಿಯಲ್ಲಿಯೇ ಹುಟ್ಟಿ ಬೆಳೆದು ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಓದಿ ಯುಪಿಎಸ್ಸಿ ಪರೀಕ್ಷೆ ತಯಾರಿಗೆ ದೆಹಲಿಗೆ ಹೋಗಿದ್ದೆ. ಇಲ್ಲಿ ಬಹುತೇಕರು ಗ್ರಾಮೀಣ ಭಾಗದವರೇ ಇದ್ದೀರಿ. ಶ್ರಮ ಪಟ್ಟು ಓದಿ. ಪ್ರಸ್ತುತ ಪರೀಕ್ಷೆ ತಯಾರಿಗೆ ದೆಹಲಿಗೆ ಹೋಗಬೇಕೆಂದಿಲ್ಲ. ಬೆಂಗಳೂರಿನಲ್ಲಿ ಅತ್ಯುತ್ತಮ ತರಬೇತಿ ಕೇಂದ್ರಗಳಿವೆ. ಮೈಸೂರಿನ ಕೆಎಸ್ಒಯು ನಡೆಸುತ್ತಿರುವ ತರಬೇತಿಯು ಅತ್ಯುತ್ತಮವಾಗಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.
ಹಾರ್ಡ್ ವರ್ಕ್ ಮತ್ತು ಪರಿಶ್ರಮದ ಜೊತೆಗೆ ಓದಿನಲ್ಲಿ ತಯಾರಿ ಇರಲಿ. ನಿದ್ರೆಯು ಮುಖ್ಯ. ನಿದ್ದೆಗೆಟ್ಟಿ ಓದುವುದು ಬೇಡ. ಎಲ್ಲದಕ್ಕೂ ಸಮಯ ಪಾಲನೆ ಇದ್ದರೆ ಒಳಿತು. ತಯಾರಿ ಸಮಯದಲ್ಲಿ ವಿದ್ಯಾರ್ಥಿಗಳು ಗುಂಪು ರಚಿಸಿಕೊಂಡು ಆಯ್ಕೆವಾರು ವಿಷಯಗಳನ್ನು ಚರ್ಚಿಸಿ. ಸಾಧ್ಯವಾದಷ್ಟು ಸಾಮಾಜಿಕ ಜಾಲತಾಣದ ಗೀಳಿನಿಂದ ದೂರವಿದ್ದು, ದೈನಂದಿನ ದೈಹಿಕ ಚಟುವಟಿಕೆ ಕಡೆಗೆ ಗಮನ ಹರಿಸಿ ಎಂದರು.
ಪರೀಕ್ಷೆ ಸಿದ್ಧತೆ ಕುರಿತು ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಜಿ.ಎಸ್ ಸೋಮಶೇಖರ್, ಪರೀಕ್ಷೆ ಎದುರಿಸುವುದಕ್ಕೆ ದೃಢ ಮನಸ್ಸು ಇರಬೇಕು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ಪರೀಕ್ಷೆ ಯಶಸ್ಸಿನ ತಂತ್ರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು, ಆತ್ಮವಿಶ್ವಾಸ, ಸಮಯ ಪಾಲನೆ, ನೆನಪಿನ ಶಕ್ತಿ, ಪರೀಕ್ಷೆ ಬರೆಯುವ ತಂತ್ರ ಕಲಿತರೆ ಗೆಲುವು ನಿಮ್ಮದೆ ಎಂದು ಹೇಳಿದರು.
ನಾವು ಸಾವಿರ ಜನರಿಗಿನ್ನ ಮುಂದೆ ಇದ್ದೀವಿ ಎನ್ನುವ ಭರವಸೆ ಇರಲಿ. ಪರೀಕ್ಷೆ ಬರೆದ ಮೊದಲ ಬಾರಿಯಲ್ಲಿ ಆಯ್ಕೆಯಾಗಬೇಕು ಎನ್ನುವ ಛಲ ಇರಲಿ ಆದರೆ ಆಗದೆ ಇದ್ದಾಗ ಛಲ ಬಿಡಬೇಕು ಮತ್ತೆ ಪ್ರಯತ್ನಿಸಿ ಎಂದರು.
ಯುಪಿಎಸ್ಸಿ ಕೆಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದರೆ ಇನ್ನೀತರ ಬೇರೆ ಸ್ಪರ್ಧಾತ್ಮಕ ಪರೀಕ್ಷೆಗೂ ಕೂಡ ಅನುಕೂಲ ವಾಗಲಿದೆ. ದಿನದ 24 ಗಂಟೆಯನ್ನು ವಿಂಗಡಿಸಿಕೊಂಡು ಸಮಯ ಪರಿಪಾಲಿಸಿ ಎಂದು ಹೇಳಿದರು.
ಪರೀಕ್ಷೆ ಬಗ್ಗೆ ತಿಳಿವಳಿಕೆ ಇರಬೇಕು. ಪಠ್ಯಕ್ರಮ, ಪರೀಕ್ಷೆ ಮಾದರಿ, ಹಿಂದಿನ ವರ್ಷದ ಪ್ರಶ್ನೆ ಪ್ರತ್ರಿಕೆಗಳ ಅಧ್ಯಯನದ ಜೊತೆಗೆ ಪ್ರತಿನಿತ್ಯ ದಿನಪತ್ರಿಕೆ, ನಿಮ್ಮಿಷ್ಟದ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರು ಮಾತನಾಡಿ, ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟು ಓದಬೇಕು. ನಿಮ್ಮ ನಿರಂತರ ಪ್ರಯತ್ನದಿಂದ ಎಲ್ಲವೂ ಸಾಧ್ಯ. ಶಿಕ್ಷಣ ಉದ್ಯೋಗದ ಜೊತೆಗೆ ಶಿಸ್ತನ್ನು ಕಲಿಸುತ್ತದೆ ಎಂದು ಹೇಳಿದರು.
ಕುಲಸಚಿವ ಪ್ರೊ.ಕೆ.ಬಿ ಪ್ರವೀಣ ಅವರು ಮಾತನಾಡಿ, ವಿದ್ಯಾರ್ಥಿಗಳು ಹಾರ್ಡ್ ವರ್ಕ್ ಜೊತೆಗೆ ಸ್ಮಾರ್ಟ ವರ್ಕ್ ಮಾಡಬೇಕು..ಆಸೆ ಪಟ್ಟು ಓದಿ. ವಿವಿಯ ಆವರಣದಲ್ಲಿ ಎಲ್ಲಾ ರೀತಿಯ ಸೌಕರ್ಯಗಳಿವೆ. ಇವುಗಳನ್ನು ಉಪಯೋಗಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.ಇದನ್ನು ಓದಿ –ಕೆಳಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆ ನಡೆಸಿದ ರೈತರು , ಗ್ರಾಮಸ್ಥರು
ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಹೆಚ್.ವಿಶ್ವನಾಥ್, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಉಪಸ್ಥಿತಿತರಿದ್ದರು.