- ವಾಷಿಂಗ್ಟನ್ ಸುಂದರ್ ಅಜೇಯ 49 ರನ್; ಸರಣಿ 1-1 ಸಮಬಲ
ಹೋಬಾರ್ಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ 187 ರನ್ ಗುರಿ ಬೆನ್ನಟ್ಟಿದ ಭಾರತ, 18.3 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ವಾಷಿಂಗ್ಟನ್ ಸುಂದರ್ ಕೇವಲ 23 ಎಸೆತಗಳಲ್ಲಿ ಅಜೇಯ 49 ರನ್ ಬಾರಿಸಿದರು. ಅಭಿಷೇಕ್ ಶರ್ಮಾ (25), ತಿಲಕ್ ವರ್ಮಾ (29), ಸೂರ್ಯಕುಮಾರ್ ಯಾದವ್ (24) ಹಾಗೂ ಜಿತೇಶ್ ಶರ್ಮಾ (22) ಸಹಕಾರ ನೀಡಿದರು.
ಆಸೀಸ್ ಪರ ಟಿಮ್ ಡೇವಿಡ್ (74) ಮತ್ತು ಮಾರ್ಕಸ್ ಸ್ಟೋಯಿನಿಸ್ (64) ಅರ್ಧಶತಕ ಬಾರಿಸಿ ತಂಡಕ್ಕೆ 186 ರನ್ ಒದಗಿಸಿದರು. ಭಾರತ ಪರ ಅರ್ಷದೀಪ್ ಸಿಂಗ್ ಮೂರು, ವರುಣ್ ಚಕ್ರವರ್ತಿ ಎರಡು ಹಾಗೂ ಶಿವಂ ದುಬೆ ಒಂದು ವಿಕೆಟ್ ಪಡೆದರು.
ಈ ಗೆಲುವಿನಿಂದ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರೆ, ಎರಡನೇ ಪಂದ್ಯದಲ್ಲಿ ಭಾರತ ಸೋತಿತ್ತು.








