By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಸೆರೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಸೆರೆ
CrimeKarnatakaUttara Kannada

ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಸೆರೆ

Team Varthaman
Last updated: July 15, 2026 10:39 AM
Team Varthaman
Published: July 15, 2026
Share
SHARE

ಕಲಬುರಗಿ: ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಮಂಗಳವಾರ ಬೆಳಗ್ಗೆ ಸುಮಾರು 4.35ರ ವೇಳೆಗೆ ಕಲಬುರಗಿ ಕೇಂದ್ರ ಕಾರಾಗೃಹದ ಗೋಡೆ ಹಾರಿ ಮಸ್ತಾನ್, ಸಂತೋಷ ಹಾಗೂ ಸಾಗರ ಎಂಬ ಮೂವರು ಕೈದಿಗಳು ಪರಾರಿಯಾಗಿದ್ದರು. ಘಟನೆ ಬಳಿಕ ಆರೋಪಿಗಳ ಬಂಧನಕ್ಕಾಗಿ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಪೊಲೀಸರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿತ್ತು.

Contents
  • ಕಲಬುರಗಿ: ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
    • ಸಿಸಿಟಿವಿಯಲ್ಲಿ ಸೆರೆ
Join WhatsApp Group

ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ, ಪರಾರಿಯಾಗಿದ್ದ ಸಂತೋಷ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಅಡಗಿಕೊಂಡಿದ್ದ. ಆತನನ್ನು ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಆತ್ಮರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಆತ ಶರಣಾಗದ ಹಿನ್ನೆಲೆಯಲ್ಲಿ ಬಲಗಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಗಾಯಗೊಂಡ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ನಡೆದ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಡಿಸಿಪಿ ಶಾಲೂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನೂ ಪರಾರಿಯಾಗಿರುವ ಉಳಿದ ಇಬ್ಬರು ಕೈದಿಗಳಿಗಾಗಿ ವಿವಿಧ ಪ್ರದೇಶಗಳಲ್ಲಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.ಇದನ್ನು ಓದಿ –ರಾಜ್ಯದಲ್ಲಿ 32 ಮಂದಿಗೆ ಕೋವಿಡ್ ಸೋಂಕು ದೃಢ

ಸಿಸಿಟಿವಿಯಲ್ಲಿ ಸೆರೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಕೈದಿಗಳು ಪರಾರಿಯಾಗುವ ದೃಶ್ಯ ಜೈಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

  • ಟೆಂಡರ್ ಉಲ್ಲಂಘನೆ: ಇಬ್ಬರು ಅಧಿಕಾರಿಗಳು ಅಮಾನತು
    by Team Varthaman
  • ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಸೆರೆ
    by Team Varthaman
  • ರಾಜ್ಯದಲ್ಲಿ 32 ಮಂದಿಗೆ ಕೋವಿಡ್ ಸೋಂಕು ದೃಢ
    by Team Varthaman
  • ಶಿಕ್ಷಕರ ಕಿರುಕುಳ ಆರೋಪ: 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
    by Team Varthaman
  • ಹೈಕಮಾಂಡ್ ಭೇಟಿ ಬಳಿಕ ಸಂಪುಟ ವಿಸ್ತರಣೆ: ಸಿ.ಎಂ ಡಿಕೆಶಿ
    by Team Varthaman
ಸಿಎಂ ಗೆ ಅವಹೇಳನ: ಪೇದೆ ಅಮಾನತು
ರಾಜ್ಯದಲ್ಲಿ 32 ಮಂದಿಗೆ ಕೋವಿಡ್ ಸೋಂಕು ದೃಢ
ರಾಮನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಹತ್ಯೆ: ಆರೋಪಿ ಬಂಧನ
ಕಬಿನಿ ಜಲಾಶಯ ಭರ್ತಿಯ ಹಂತದಲ್ಲಿ, ಹೇಮಾವತಿಗೂ ಒಳಹರಿವು ಹೆಚ್ಚಳ
ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ
TAGGED:escaped inmateKalaburagi jaillatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruJobsKarnatakaTrending

ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ಒಪ್ಪಿಗೆ

Team Varthaman
Team Varthaman
May 23, 2025
ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ: ಸಿದ್ದರಾಮಯ್ಯ
ಮೈಸೂರು–ಕುಶಾಲನಗರ ರೈಲ್ವೆ ಯೋಜನೆಗೆ ಯದುವೀರ್ ಮನವಿ
ಹೆಣ್ಣು ಮಕ್ಕಳ ವ್ಯಥೆ
ಸಂಪುಟ ಪುನಾರಚನೆ ಅಗತ್ಯ: ಸಿದ್ದರಾಮಯ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?