ಬೆಂಗಳೂರು: IPL ಪಂದ್ಯಗಳ ವೇಳೆ ಅಕ್ರಮವಾಗಿ ಹೆಚ್ಚುವರಿ ದರಕ್ಕೆ ಟಿಕೆಟ್ ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರ ವಿರುದ್ಧ ಬೆಂಗಳೂರು ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಈ ಸಂಬಂಧ 17 ಪ್ರಕರಣಗಳು ದಾಖಲಾಗಿದ್ದು, 24 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಿಂದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಕ್ರಿಕೆಟ್ ಅಭಿಮಾನಿಗಳ ಆಸೆಯನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಲಾಭ ಗಳಿಸಲು ಯತ್ನಿಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.ಇದನ್ನು ಓದಿ –ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ
ಈ ಮೂಲಕ ಐಪಿಎಲ್ ಟಿಕೆಟ್ ಬ್ಲಾಕ್ ಮಾರ್ಕೆಟ್‌ಗೆ ಕಡಿವಾಣ ಹಾಕುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.








