ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಒಡೆತನದ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದಲ್ಲಿರುವ ಚರ್ಚ್ ಸ್ಟ್ರೀಟ್ ಸಮೀಪದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ ಮುಂಬೈ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಈ ದಾಳಿ ಬೆಂಗಳೂರಿನಲ್ಲಷ್ಟೇ ಸೀಮಿತವಾಗದೆ, ಮುಂಬೈನ ವಿವಿಧ ಸ್ಥಳಗಳಲ್ಲಿಯೂ ಏಕಕಾಲದಲ್ಲಿ ಐಟಿ ಇಲಾಖೆ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ.ಇದನ್ನು ಓದಿ – ಗ್ರಾಹಕರಿಗೆ ವಂಚನೆ: 2,334 ಕಂಪನಿಗಳ ವಿರುದ್ಧ ಪ್ರಕರಣಗಳು ದಾಖಲು
ಪಬ್‌ನ ಲೆಕ್ಕಪತ್ರಗಳು ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿದುಬಂದಿದೆ.








