- ಕುಮಾರಸ್ವಾಮಿ ಭೇಟಿ ಕುರಿತು ಜಿಟಿಡಿ ಸ್ಪೋಟಕ ಹೇಳಿಕೆ
ಮೈಸೂರು: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ಮುಖ್ಯಮಂತ್ರಿ ಆಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು (H.D Kumaraswamy) ಭೇಟಿಯಾಗಿದ್ದಾರೆ ಎಂಬ ಮಹತ್ವದ ಹೇಳಿಕೆಯನ್ನು ಶಾಸಕ ಜಿ.ಟಿ. ದೇವೇಗೌಡ (G.T. Devegowda) ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಂದೆ ಸಿಎಂ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‌ನ 18 ಶಾಸಕರ ಬೆಂಬಲವನ್ನು ಅವರು ಕೇಳಿರಬಹುದು. ರಾಜಕಾರಣದಲ್ಲಿ ಯಾವಾಗ ಏನಾಗುತ್ತದೋ ಹೇಳಲು ಸಾಧ್ಯವಿಲ್ಲ. ಈಗಿನ ರಾಜಕೀಯ ಪರಿಸ್ಥಿತಿ ನೋಡಿದರೆ, ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿಯವರನ್ನು ಭೇಟಿಯಾದಿರುವ ಸಾಧ್ಯತೆ ಕಡಿಮೆ” ಎಂದಿದ್ದಾರೆ.
“ಜಾರಕಿಹೊಳಿಯವರು ಮಾಜಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದರೆ, ಅದಕ್ಕೆ ಮುಖ್ಯಮಂತ್ರಿ ಆಸೆನೇ ಕಾರಣ ಎಂದು ಹೇಳಬಹುದು. ಒಂದು ವೇಳೆ ಜೆಡಿಎಸ್ ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಆದರೆ, ಈ ವಿಷಯದಲ್ಲಿ ಮಾತ್ರ ನಾನು ತಟಸ್ಥನಾಗುವುದಿಲ್ಲ” ಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ.
ಯತ್ನಾಳ್ ಉಚ್ಚಾಟನೆ ಕುರಿತು ಪ್ರತಿಕ್ರಿಯೆ:
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಜಿಟಿಡಿ, “ಅದು ಅವರ ಪಕ್ಷದ ಆಂತರಿಕ ವಿಚಾರ. ನಾನು ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಮುಂದೆ ಯಾವ ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡೋಣ” ಎಂದಿದ್ದಾರೆ.
ಹನಿಟ್ರ್ಯಾಪ್ ಪ್ರಕರಣದ ಕುರಿತು ವ್ಯಂಗ್ಯ:
ಹನಿಟ್ರ್ಯಾಪ್ ಪ್ರಕರಣದ ಕುರಿತು, “ಸದನದಲ್ಲಿ ಸುನಿಲ್ ಕುಮಾರ್ ಹಾಗೂ ರಾಜಣ್ಣ ಈ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕದ ರಾಜಕಾರಣ ಇತಿಹಾಸ ಹೊಂದಿದೆ. ಇತ್ತೀಚಿನ ಘಟನೆಗಳನ್ನು ನೋಡಿದರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ ಎನಿಸುತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.
ಅಭಿವೃದ್ಧಿ ಚರ್ಚೆಗೆ ಅವಕಾಶವೇ ಇಲ್ಲ:
“ಸದನದಲ್ಲಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ ಗಲಾಟೆ-ಗದ್ದಲದಲ್ಲೇ ಸದನ ಮುಗಿದಿತು. ಸಿದ್ದರಾಮಯ್ಯ ಏನೂ ಬಜೆಟ್ ಮಂಡನೆ ಮಾಡಿದರು ಎಂಬುದು ಜನತೆಗೆ ಅರ್ಥವಾಗಲೇ ಇಲ್ಲ. ಅಭಿವೃದ್ಧಿ ಬಗ್ಗೆ ಚರ್ಚೆ ನಡೆದಿದ್ದರೆ ಜನ ಖುಷಿಯಾಗುತ್ತಿದ್ದರು” ಎಂದು ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
- ಪಹಲ್ಗಾಮ್ ಉಗ್ರರು ಚೆನ್ನೈನಿಂದ ಶ್ರೀಲಂಕಾಗೆ ಪರಾರಿ?
- ಕನ್ನಡಿಗರ ವಿರುದ್ಧ ವಿವಾದಿತ ಹೇಳಿಕೆ: ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
- ಯೂನಿಯನ್ ಬ್ಯಾಂಕ್ನಲ್ಲಿ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗೋವಾ ಶಿರಗಾವ್ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು, 50 ಕ್ಕೂ ಹೆಚ್ಚು ಮಂದಿಗೆ ಗಾಯ
- ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ