ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕಾವೇರಿ ವಿಚಾರದಲ್ಲಿ ತಮಿಳುನಾಡು ಸರ್ಕಾರ ಪದೇಪದೇ ಕರ್ನಾಟಕಕ್ಕೆ ತೊಂದರೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು. ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮೇಕೆದಾಟು ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು.
“ಮೇಕೆದಾಟು ಯೋಜನೆ ಜಾರಿಗೆ ಯಾವುದೇ ಅನುಮತಿ ಬೇಕಿಲ್ಲ. ಕಾವೇರಿ ವಿಷಯದಲ್ಲಿ ಸರ್ಕಾರ ವಿಳಂಬ ಮಾಡದೆ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು” ಎಂದು ಅವರು ಒತ್ತಾಯಿಸಿದರು.
ಮೇಕೆದಾಟು ಯೋಜನೆ ಜಾರಿ ಹಾಗೂ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ವಾಟಾಳ್ ನಾಗರಾಜ್ ಘೋಷಿಸಿದರು.
“ಬಂದ್ ಹಿಂಪಡೆಯುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಆದರೆ ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಮ್ಮೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ಆದ್ದರಿಂದ ಬಂದ್ ಹಿಂಪಡೆಯುವ ಪ್ರಶ್ನೆಯೇ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದರು.ಇದನ್ನು ಓದಿ –ಮಧ್ಯಪ್ರಾಚ್ಯ ಉದ್ವಿಗ್ನತೆ: ತೈಲ ಬೆಲೆ ಎರಿಕೆ
ಬಂದ್‌ಗೆ ಮುನ್ನ ಆಗಸ್ಟ್ 10ರಂದು ಅತ್ತಿಬೆಲೆ ಗಡಿಯಲ್ಲಿ ಪ್ರತಿಭಟನೆ ನಡೆಸಿ ಗಡಿ ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.








