ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನನ್ನು ಪರಿಶೀಲಿಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ. ಅಧಿಕಾರಿಗಳು ನಾಲ್ಕು ಕ್ಯಾಪ್ಸೂಲ್‌ಗಳಲ್ಲಿ ಅಡಗಿಸಿಟ್ಟಿದ್ದ 899.50 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಲಾದ ಚಿನ್ನದ ಮೌಲ್ಯ ಸುಮಾರು 1.37 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಬಳಿಯಿಂದ ಸುಮಾರು 1.75 ಕೋಟಿ ರೂ. ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಇದನ್ನು ಓದಿ –KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಮಾದಕ ವಸ್ತು ಮತ್ತು ಮನೋವಿಕಾರಿ ಔಷಧಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.








