ಮೈಸೂರು: 1.20 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ನಂಜನಗೂಡು ತಾಲೂಕು ಭೂಮಾಪಕ ಜಯಪ್ರಕಾಶ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಣ್ಣ ಬಯಲಾಗಿ ಬಂಧಿಸಿದ್ದಾರೆ.
ಮೈಸೂರಿನ ದಟ್ಟಗಳಿಯ ಸಮೀಪದ ಹೋಟೆಲ್ ಬಳಿ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮೂಲತಃ 1.50 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಯಪ್ರಕಾಶ್, ಬಳಿಕ 1.30 ಲಕ್ಷ ರೂಪಾಯಿಗೆ ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಅದರಂತೆ ಇಂದು 1.20 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ.ಇದನ್ನು ಓದಿ –ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಜೆ. ಉದೇಶ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.








