ಬೆಂಗಳೂರು : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಹಿರಿಯ ವಕೀಲರೊಬ್ಬರು ಶೂ ಎಸೆದ ಘಟನೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಈ ಘಟನೆಯ ಸಂಬಂಧವಾಗಿ ವಕೀಲ ರಾಕೇಶ್ ಕಿಶೋರ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಹಿರಿಯ ವಕೀಲ ಭಕ್ತವತ್ಸಲ ಅವರ ದೂರು ಆಧರಿಸಿ, ವಿಧಾನಸೌಧ ಠಾಣೆ ಪೊಲೀಸರು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ರಾಕೇಶ್ ಕಿಶೋರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಕ್ಟೋಬರ್ 6ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ವಕೀಲ ರಾಕೇಶ್ ಕಿಶೋರ್ ಏಕಾಏಕಿ ಸಿಜೆಐ ಬಿ.ಆರ್. ಗವಾಯಿ ಅವರ ಕಡೆ ಶೂ ಎಸೆದಿದ್ದರು. ಈ ಕೃತ್ಯ ಕಾನೂನುಬಾಹಿರವಾಗಿದ್ದು, ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಭಕ್ತವತ್ಸಲ ದೂರಿನಲ್ಲಿ ತಿಳಿಸಿದ್ದಾರೆ.ಇದನ್ನು ಓದಿ –ಮೈಸೂರು : ದಸರಾಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.








