ಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ನಗರದ ಬಸವನಗುಡಿಯಲ್ಲಿರುವ ರೂಪ್ಲಾ ನಾಯ್ಕ್ ಅವರ ಬಾಡಿಗೆ ಮನೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿಯಲ್ಲಿ ಲೋಕಾಯುಕ್ತ ತಂಡ ಪರಿಶೀಲನೆ ನಡೆಸುತ್ತಿದೆ. ಜೊತೆಗೆ, ಬೆಂಗಳೂರಿನಲ್ಲಿ ಅವರ ಕುಟುಂಬ ನೆಲೆಸಿರುವ ನಿವಾಸದ ಮೇಲೂ ದಾಳಿ ನಡೆದಿದೆ.
ಇದಲ್ಲದೆ, ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ಶಿವಮೊಗ್ಗದ ವಿದ್ಯಾನಗರದಲ್ಲಿರುವ ಮನೆಗೂ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಒಟ್ಟು ಆರು ಪ್ರತ್ಯೇಕ ತಂಡಗಳು ವಿವಿಧ ಸ್ಥಳಗಳಲ್ಲಿ ಸಮಕಾಲೀನವಾಗಿ ದಾಳಿ ನಡೆಸಿ ದಾಖಲೆಗಳು ಮತ್ತು ಆಸ್ತಿಗಳ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.ಇದನ್ನು ಓದಿ –‘ಗ್ರೇಟರ್ ತುಮಕೂರು’ ರಚನೆಗೆ ಚಿಂತನೆ: ಗೃಹ ಸಚಿವ ಪರಮೇಶ್ವರ್
ಲೋಕಾಯುಕ್ತ ದಾಳಿಯ ವೇಳೆ ಪತ್ತೆಯಾಗಿರುವ ದಾಖಲೆಗಳು ಮತ್ತು ಮಾಹಿತಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.








