ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿಯಲ್ಲಿ ದಾರುಣ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆ ಶರಣಾವರನ್ನು ಸತೀಶ್ (18) ಮತ್ತು ಶ್ವೇತ (17) ಎಂದು ಗುರುತಿಸಲಾಗಿದೆ.
ಇಬ್ಬರೂ ಬೈಕ್‌ನಲ್ಲಿ ಬಂದು ಬ್ಯಾಟರಾಯನಹಳ್ಳಿ ಬಳಿ ನಿಲ್ಲಿಸಿ, ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನು ಓದಿ –ಇಂದಿನಿಂದ ಶ್ರೀರಂಗಪಟ್ಟಣ ದಸರಾ ಉತ್ಸವ
ಈ ಕುರಿತು ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆಸಲಾಗಿದೆ.








