ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಇತ್ತೀಚೆಗೆ 39 ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿದ ಹಿನ್ನೆಲೆಯಲ್ಲಿ, ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಮಂಡ್ಯ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆರ್. ಲತಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ಎಂ.ಎಸ್. ಆತ್ಮಾನಂದ ಅವರು ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶ ಬರುವವರೆಗೂ ನಿಗಮದ ಅಧ್ಯಕ್ಷ ಸ್ಥಾನದಲ್ಲಿರಲಿದ್ದಾರೆ.ಇದನ್ನು ಓದಿ –ಲೋಕಾಯುಕ್ತ ದಾಳಿ: ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಅಕ್ರಮ ಆಸ್ತಿ ತನಿಖೆ
ಈ ನೇಮಕಾತಿಯಿಂದ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಹೊಸ ಉತ್ಸಾಹ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.








