ಮಂಡ್ಯ: ಟ್ರ್ಯಾಕ್ಟರ್ ಒಬ್ಬ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವಿಗೀಡಾಗಿರುವ ದುರಂತ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಎಪಿಎಂಸಿ ಮಾರುಕಟ್ಟೆ ಬಳಿಯಲ್ಲಿ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಕೆಆರ್ ಪೇಟೆ ಪಟ್ಟಣದ ನಿವಾಸಿ ಪ್ರವೀಣ್ (34) ಎಂದು ಗುರುತಿಸಲಾಗಿದೆ. ಅವರು ರಸ್ತೆ ಬದಿ ನಿಂತಿದ್ದ ವೇಳೆ ಟ್ರ್ಯಾಕ್ಟರ್ ಬಂದುದರಿಂದ ಡಿಕ್ಕಿಯಾಗಿದ್ದು, ಅವರು ತಕ್ಷಣವೇ ಸ್ಥಳದಲ್ಲೇ ಸಾವಿಗೀಡಾದರು.
ಘಟನೆ ಸ್ಥಳಕ್ಕೆ ಕೆಆರ್ ಪೇಟೆ ಪಟ್ಟಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನು ಓದಿ –ಡಿಗ್ರಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ.